ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ (Bantakal, Udupi: Farewell Program for Final Year students at SMVITM Bantakal)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ (Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ೧೨ನೇ ವರ್ಷದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವು ಕಾಲೇಜಿನ ಆವರಣದಲ್ಲಿ ನೆರವೇರಿತು. ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ರಾಧಾಕೃಷ್ಣ ಐತಾಳ್‌ರವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ರವರು ಅಂತಿಮ ವರ್ಷದ ವಿದ್ಯಾರ್ಥಿಗಳ ಸಾಧನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳು […]










