ಕರಾವಳಿ
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ವರದಿಗಳಿಗೆ ನಿರ್ಬಂಧ
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ವರದಿಗಳಿಗೆ ನಿರ್ಬಂಧಬೆಂಗಳೂರು: ಧರ್ಮಸ್ಥಳ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಯಾವುದೇ ಮಾಧ್ಯಮದ ಮೂಲಕ ಅವಹೇಳನಕಾರಿ ವರದಿ ಮಾಡದಂತೆ ಮತ್ತು ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. ಈ ಸಂಬಂಧ ವಾದಿಗಳಾದ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್-11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ 19ರಂದು ಈ ಕುರಿತಂತೆ ಆದೇಶಿಸಿದೆ. […]

