Tag: SRINIVAS NAIK INDAJE

ಅಪರಾಧ

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌ (Action to prevent misuse of fake IDs, media stickers: Police Commissioner)

ನಕಲಿ ಐಡಿ, ಮೀಡಿಯಾ ಸ್ಟಿಕ್ಕರ್‌ ದುರ್ಬಳಕೆ ತಡೆಗೆ ಕ್ರಮ: ಪೊಲೀಸ್‌ ಕಮಿಷನರ್‌ (Mangaluru) ಮಂಗಳೂರು: ಪತ್ರಕರ್ತರ ನಕಲಿ ಐಡಿ ಕಾರ್ಡ್‌ ದುರ್ಬಳಕೆ ಮಾಡುವ ಹಾಗೂ ಮೀಡಿಯಾ ನಕಲಿ ಸ್ಟಿಕ್ಕರ್‌ ಅಳವಡಿಸಿಕೊಂಡಿರುವ ವಾಹನಗಳನ್ನು ಪತ್ತೆ ಹಚ್ಚುವಂತೆ ಸಂಚಾರಿ ಪೊಲೀಸರಿಗೆ ಪೊಲೀಸ್‌ ಕಮಿಷನರ್‌ ಅನುಪಮ್‌ ಆಗರ್ವಾಲ್ ಸೂಚಿಸಿದ್ದಾರೆ.    ಪತ್ರಕರ್ತರ ನಕಲಿ ಐಡಿ ಕಾರ್ಡ್ ದುರ್ಬಳಕೆ, ಮೀಡಿಯಾ, ಪ್ರೆಸ್ ಸ್ಟಿಕರ್ ದುರ್ಬಳಕೆಗೆ ಕಡಿವಾಣ ಹಾಕುವಂತೆ ಹಾಗೂ ಕರ್ತವ್ಯ ನಿರ್ವಹಿಸುವ ಸಂದರ್ಭ ಪತ್ರಕರ್ತರಿಗೆ ಭದ್ರತೆ ಖಾತ್ರಿ ಪಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ  […]

social service

ಫೆ.8: “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ‌ (Feb. 8: “Swarasanidhya” National Level Youth Music Festival)

ಫೆ.8: “ಸ್ವರಸಾನಿಧ್ಯ” ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ (Mangaluru) ಮಂಗಳೂರು: “ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಶನ್ ಸೆಂಟರ್‌ನಲ್ಲಿ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತೋತ್ಸವ ಹಾಗೂ ದೇಶದ ಖ್ಯಾತ ಸಂಗೀತ ಕಲಾವಿದರ ಸಂಗೀತ ಕಾರ್ಯಕ್ರಮ ಫೆಬ್ರವರಿ 8ರಂದು ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರರಾದ ಶ್ರೀನಿವಾಸ್ ನಾಯಕ್ ಇಂದಾಜೆ ಮಾಹಿತಿ ನೀಡಿದರು. ಅವರು ಮಂಗಳೂರು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.   ಬೆಳಗ್ಗೆ 8 ಗಂಟೆಗೆ […]

help

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯ ಆಯ್ಕೆ ಸಮಿತಿ ಸದಸ್ಯರಾಗಿ  ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ (Free bus passes distributed to rural journalists: Srinivas Nayak Indaje appointed as member of the state selection committee)

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಣೆ: ರಾಜ್ಯ ಆಯ್ಕೆ ಸಮಿತಿ ಸದಸ್ಯರಾಗಿ  ಶ್ರೀನಿವಾಸ್ ನಾಯಕ್ ಇಂದಾಜೆ ನೇಮಕ (Mangaluru) ಮಂಗಳೂರು:ರಾಜ್ಯದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಸಾರಿಗೆ ಬಸ್ ಪಾಸ್ ವಿತರಣೆ ಮಾಡಲು ಸರಕಾರ ರಚಿಸಿರುವ ರಾಜ್ಯ ಸಮಿತಿ ಸದಸ್ಯರಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಹಿರಿಯ ಪತ್ರಕರ್ತ ಶ್ರೀನಿವಾಸ ನಾಯಕ್ ಇಂದಾಜೆ ಅವರನ್ನು ನೇಮಕ ಮಾಡಿ‌ ಸರಕಾರ ಆದೇಶ ಮಾಡಿದೆ.  ಗ್ರಾಮೀಣ‌ ಪತ್ರಕರ್ತರಿಗೆ ವೃತ್ತಿ ಸಂಬಂಧಿಸಿ ಜಿಲ್ಲಾ ವ್ಯಾಪ್ತಿಯಲ್ಲಿ ಸರಕಾರಿ ಬಸ್‌ನಲ್ಲಿ ಓಡಾಟ ನಡೆಸಲು […]

PROBLEMS ಸಂಘ, ಸಂಸ್ಥೆಗಳು

 ಸುದ್ದಿಗಾಗಿ ಹಣದಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ : ಡಾ.ಮೋಹನ್ ಆಳ್ವ (Sancitity of journalism thtreatend by money for news :Dr. Mohan Alva)   

ಸುದ್ದಿಗಾಗಿ ಹಣದಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ : ಡಾ.ಮೋಹನ್ ಆಳ್ವ     ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ ಉದ್ಘಾಟನೆ: (Mangalore) ಮಂಗಳೂರು: ಸುದ್ದಿಗಾಗಿ ಹಣಸಂಸ್ಕೃತಿ  ಪತ್ರಿಕೋದ್ಯಮದ  ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ […]

ಸಂಘ, ಸಂಸ್ಥೆಗಳು

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ (Brand Mangaluru Friendly Cricket Tournment)

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯಾಟ ಎಸ್.ಪಿ ತಂಡ ಪ್ರಥಮ, ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಮಂಗಳೂರು,ಅ. 3,ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ದ.ಕ ಎಸ್.ಪಿ ತಂಡ ಪ್ರಥಮ, ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ.  ಉತ್ತಮ ಎಸೆತಗಾರನಾಗಿ ಮಂಗಳೂರು ಕಮೀಶನರ್ ತಂಡದ ಆಟಗಾರ ರಂಜನ್, ಉತ್ತಮ ದಾಂಡಿಗ ಪ್ರಶಸ್ತಿಯನ್ನು ಮಂಗಳೂರು ಕಮೀಷನರ್ ತಂಡದ ಸಿದ್ದಾರ್ಥ, ಪಂದ್ಯ ಪುರುಷನಾಗಿ ಹಾಗೂ ಸರಣಿ ಶ್ರೇಷ್ಠ ಆಟಗಾರನಾಗಿ ದಕ್ಷಿಣ ಕನ್ನಡ ಎಸ್ ಪಿ ತಂಡದ ಶಿವಕುಮಾರ್ […]

ಮನೋರಂಜನೆ

ಸಂಗೀತದ ಆಕರ್ಷಣೆಯಿಂದ ಬದಲಾದ ಬದುಕು ಸಂಗೀತ ನಿರ್ದೇಶಕ ಡಾ. ಗುರುಕಿರಣ್(Life changed by the attaraction of music : Music Drector Dr. Gurukiran)

ಸಂಗೀತದ ಆಕರ್ಷಣೆಯಿಂದ ಬದಲಾದ ಬದುಕು ಸಂಗೀತ ನಿರ್ದೇಶಕ ಡಾ. ಗುರುಕಿರಣ್ (mangaluru) ಮಂಗಳೂರು : ವೈದ್ಯನಾಗಬೇಕೆಂದು ಹೆತ್ತವರು ಪಿಯುಸಿಯಲ್ಲಿ ವಿಜ್ಞಾನ ವಿಭಾಗಕ್ಕೆ ಸೇರಿಸಿದ್ದರು. ವೈದ್ಯಕೀಯ ಕಾಲೇಜುಆರಂಭಕ್ಕೆ ಸ್ವಲ್ಪ ಸಮಯವಿದೆ ಎಂದು ಸಮಯ ಕಳೆಯಲು ಮಂಗಳೂರಿನ ಸರ್ಕಾರಿ ಕಾಲೇಜಿಗೆ ಸೇರಿದೆ. ಅಲ್ಲಿ ಕಲಾ ಕ್ಷೇತ್ರ ಆಕರ್ಷಿಸಿತು. ಹಾಡುಗಾರನಾದೆ, ನಟನಾದೆ, ಸಂಗೀತ ನಿರ್ದೇಶಕನಾದೆ. ಸಂಗೀತದ ಆಕರ್ಷಣೆಯಿಂದ ಬದುಕೇ ಬದಲಾಯಿತು ಎಂದು ಸಂಗೀತ ನಿರ್ದೇಶಕ, ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪುರಸ್ಕೃತರಾದ ಗುರುಕಿರಣ್ ತಮ್ಮ ಸಾಧನೆಯ ಹಾದಿಯನ್ನು ತೆರೆದಿಟ್ಟರು. ಮಂಗಳೂರು ಪ್ರೆಸ್ ಕ್ಲಬ್ […]

social service ಸಂಘ, ಸಂಸ್ಥೆಗಳು

ದ.ಕ. ಅಭಿವೃದ್ಧಿಯ ಪರಿಕಲ್ಪನೆಯ ಜೊತೆಗೆ  ಪ್ರವಾಸೋದ್ಯಮಕ್ಕೆ ಒತ್ತು: ಎಂಎಲ್‌ಸಿ ಮಂಜುನಾಥ ಭಂಡಾರಿ (DK Emphasis on tourism along with concept of development : MLC Manjunath Bhandari)

ದ.ಕ. ಅಭಿವೃದ್ಧಿಯ ಪರಿಕಲ್ಪನೆಯ ಜೊತೆಗೆ  ಪ್ರವಾಸೋದ್ಯಮಕ್ಕೆ ಒತ್ತು: ಮಂಜುನಾಥ ಭಂಡಾರಿ (Magaluru) ಮಂಗಳೂರು: ಧಾರ್ಮಿಕವಾಗಿ ಉತ್ತುಂಗದಲ್ಲಿರುವ ದ.ಕ. ಜಿಲ್ಲೆಯಲ್ಲಿ ಅಭಿವೃದ್ಧಿಗೆ ತೊಡಕಾಗಿರುವ ಅಂಶಗಳನ್ನು ಪರಿಗಣಿಸಿಕೊಂಡು ಸೂಕ್ತ ಪರಿಹಾರ ಕ್ರಮಗಳೊಂದಿಗೆ ಸಾಮಾಜಿಕ ಚಟುವಟಿಕೆಗಳ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪರಿಕಲ್ಪನೆ ನನ್ನದಾಗಿದೆ ಎಂದು ವಿಧಾನ ಪರಿಷತ್ ಶಾಸಕ ಡಾ. ಮಂಜುನಾಥ ಭಂಡಾರಿ ಅಭಿಪ್ರಾಯಿಸಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾಮರಸ್ಯ, ವಿಭಿನ್ನತೆಯ ನಾಡಾಗಿರುವ ದ.ಕ. ಜಿಲ್ಲೆಯಲ್ಲಿ ಹಲವು ವರ್ಷಗಳಿಂದ […]

health

 ದ.ಕ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಅಪಘಾತ ವಿಮಾ ಯೋಜನೆಗೆ ಚಾಲನೆ (Launch of Postal accident Insurance Scheme scheme for Members of DK Working journalist Association)

ದ.ಕ ಪತ್ರಕರ್ತರ ಸಂಘದ ಸದಸ್ಯರಿಗೆ ಅಂಚೆ ಅಪಘಾತ ವಿಮಾ ಯೋಜನೆಗೆ ಚಾಲನೆ ಜನಸಾಮಾನ್ಯರಿಗೆ ಅತ್ಯುತ್ತಮ ಅಂಚೆ ವಿಮಾ ಯೋಜನೆ –ಸುಧಾಕರ ಮಲ್ಯ (Mangaluru)ಮಂಗಳೂರು: ಅಂಚೆ ಅಪಘಾತ  ವಿಮಾ ಯೋಜನೆ ದೇಶದ ಅತ್ಯುತ್ತಮ ಸರಳವಾದ ಜನಸಾಮಾನ್ಯರ ಕೈಗೆಟುಕುವ ವಿಮಾ ಯೋಜನೆಯಾಗಿದೆ ಎಂದು ಭಾರತೀಯ ಅಂಚೆ ಇಲಾಖೆಯ ಮಂಗಳೂರು ಅಂಚೆ ವಿಭಾಗದ  ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ತಿಳಿಸಿದ್ದಾರೆ.     ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ನೇತೃತ್ವದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ […]

ಪ್ರಚಲಿತ

ಸಮಾಜದಲ್ಲಿ ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯುವಂತಾಗಲಿ -ಯು.ಟಿ.ಖಾದರ್ (May more contribution be made through media for peace and harmony in the society : UT Khader)

 ಸಮಾಜದಲ್ಲಿ ಶಾಂತಿ ಸಾಮರಸ್ಯಕ್ಕೆ ಮಾಧ್ಯಮದ ಮೂಲಕ ಹೆಚ್ಚಿನ ಕೊಡುಗೆ ದೊರೆಯುವಂತಾಗಲಿ –ಯು.ಟಿ.ಖಾದರ್ (Mangaluru) ಮಂಗಳೂರು: ಸಮಾಜದಲ್ಲಿ ಶಾಂತಿ ಸೌಹಾರ್ದ, ಸಾಮರಸ್ಯಕ್ಕಾಗಿ ಮಾಧ್ಯಮದ ಮೂಲಕ ಹೆಚ್ಚು ಕೊಡುಗೆ ದೊರೆಯುವಂತಾಗಲಿ ಎಂದು ವಿಧಾನ ಸಭಾಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.      ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸೋಮವಾರ ನಗರದ ಪತ್ರಿಕಾಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.  ಭವಿಷ್ಯದ ದೃಷ್ಟಿಯಿಂದ ಮಾಧ್ಯಮಗಳು,  ಜನಪ್ರತಿನಿಧಿಗಳು ಸಮಾಜದ ಸಾಮರಸ್ಯ ಕೊಂಡಿಯಾಗಬೇಕಾಗಿದೆ. ಪತ್ರಿಕೆಗಳು ಸ್ವಾತಂತ್ರ್ಯ ಪೂರ್ವದಿಂದಲೇ ಜನರ […]

social service

“ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” -ಕಮಿಷನರ್ ಅನುಪಮ್ ಅಗರ್ವಾಲ್ (“Possitive reports add to communal  harmony” Commissioner Anupam Agarwal)

ಪಾಸಿಟಿವ್ ವರದಿಗಳು ಕೋಮು ಸೌಹಾರ್ದತೆಗೆ ಪೂರಕ” –ಕಮಿಷನರ್ ಅನುಪಮ್ ಅಗರ್ವಾಲ್ ಪತ್ರಕರ್ತ ಮಿಥುನ್ ಕೊಡೆತ್ತೂರುಗೆ “ಬ್ರಾಂಡ್ ಮಂಗಳೂರು” ಪ್ರಶಸ್ತಿ ಪ್ರದಾನ  ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸ ದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು.  ನಗರದ ಪತ್ರಿಕಾ ಭವನದಲ್ಲಿ ಜರುಗಿದ ಸರಳ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪ್ರಶಸ್ತಿ ಪ್ರದಾನಗೈದು ಮಾತಾಡಿದರು. ಪ್ರತಿಯೊಂದು […]

eMedia Kannada  @2025. All Rights Reserved.