# Tags

ಉಡುಪಿ ; ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ (Udupi Syndicate Credit Sauhardha Co-op Society Ltd. General body meeting)

ಉಡುಪಿ; ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಮಹಾಸಭೆ (Udupi)  ಉಡುಪಿ : ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಉಡುಪಿ ಇದರ ಮಹಾಸಭೆಯು ಸಹಕಾರಿಯ ನೋಂದಾಯಿತ ಕಚೇರಿಯಲ್ಲಿ ಅಧ್ಯಕ್ಷರಾದ ಜೆಸಿಂತಾ ಡಿ’ ಸೋಜ ಇವರ ಅಧ್ಯಕ್ಷತೆಯಲ್ಲಿ ಜರುಗಿತು.  ಸಹಕಾರಿಯ ಅಧ್ಯಕ್ಷರಾದ ಜೆಸಿಂತಾ ಡಿಸೋಜ ಮಾತನಾಡಿ, ನಮ್ಮ ಸಹಕಾರಿಯು ಅಭಿವೃದ್ಧಿ ಹೊಂದುತ್ತಿದ್ದು, ತಮ್ಮೆಲ್ಲರ ಸಹಕಾರದಿಂದ ಈ ಮಟ್ಟಕ್ಕೆ ಬೆಳೆದಿದೆ ಎನ್ನಲು ನಮಗೆ ಸಂತೋಷವಾಗುತ್ತದೆ. ಮುಂದಿನ ಆರ್ಥಿಕ ವರ್ಷದಲ್ಲಿ ಹೊಸ ಯೋಜನೆಗಳಿಗೆ […]

ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರ ಕಳವಳ (Bishop of Udupi Catholic Diocese concerned about those who lost their lives due to land slides)

  ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರ ಕಳವಳ (Udupi) ಉಡುಪಿ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದ ಪ್ರಾಣ ಕಳೆದುಕೊಂಡವರ ಬಗ್ಗೆ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂದನೀಯ ಡಾ. ಜೆರಾಲ್ಡ್ ಐಸಾಕ್ ಲೋಬೊ ತೀವ್ರ ಕಳವಳ ವ್ಯಕ್ತಪಡಿಸಿದ್ದು, ದುರಂತದಲ್ಲಿ ನಿರಾಶ್ರಿತರಾದವರ ನೆರವಿಗೆ ಧರ್ಮಪ್ರಾಂತ್ಯ ಎಲ್ಲಾ ರೀತಿಯ ಸಹಕಾರ ನೀಡಲು ಬಯಸಿದೆ ಎಂದು ಹೇಳಿದ್ದಾರೆ.  ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಮಾಹಿತಿಗಳ ಪ್ರಕಾರ ಈಗಾಗಲೇ 150ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಇನ್ನೂ ಹಲವಾರು […]

ಉದ್ಯಾವರ: ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ‘ರೈತ ಮಿತ್ರ’ (Udyavara ; A program to encourage Farmers in agriculture land “Raitha Mithra”)

ಉದ್ಯಾವರ: ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮ ‘ರೈತ ಮಿತ್ರ’  (Udupi) ಉಡುಪಿ – ಉದ್ಯಾವರ:  ಗಾಳಿ, ಮಳೆ ಲೆಕ್ಕಿಸದೆ ಕೃಷಿ ಭೂಮಿಯಲ್ಲಿ ದುಡಿಯುತ್ತಿರುವ ರೈತರು ಮತ್ತು ಕೃಷಿಕರನ್ನು ಗುರುತಿಸಿ,  ರೋಟರಿ ಕ್ಲಬ್ ಉದ್ಯಾವರದ ಸದಸ್ಯರು ಗದ್ದೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸುವ ‘ರೈತ ಮಿತ್ರ’ ವಿಶಿಷ್ಟ ಕಾರ್ಯಕ್ರಮ ಉದ್ಯಾವರದಲ್ಲಿ ನಡೆಯಿತು. ‘ರೈತ ಮಿತ್ರ’ ಹೆಸರಿನ ಕಾರ್ಯಕ್ರಮದ ಮೂಲಕ ಕ್ಲಬ್ಬಿನ ನಿಕಟ ಪೂರ್ವ ಅಧ್ಯಕ್ಷರಾದ ರೋ. ಪ್ರಸಾದ್ ಶೆಟ್ಟಿ ರವರ ಕೃಷಿ ಭೂಮಿಯಲ್ಲಿ ರೈತರನ್ನು ಉತ್ತೇಜಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, […]

ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ  (Dengue should not be neglected : Udupi DC)

ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ : ಉಡುಪಿ ಜಿಲ್ಲಾಧಿಕಾರಿ (Udupi) ಉಡುಪಿ : ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನಿರ್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ತಿಳಿಸಿದರು.  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಲಯನ್ಸ್ ಕ್ಲಬ್ […]

‘ಅಪಘಾತ ರಹಿತ ಚಾಲಕ ಪ್ರಶಸ್ತಿ’ ಪಡೆದ ಚಾಲಕ ಅಲೆಕ್ಸಾಂಡರ್ ಕುಲಾಸೊ ನಿಧನ (Alexander Khulaso, Driver who received the “Accident Free Driver” Award, passed away.)

‘ಅಪಘಾತ ರಹಿತ ಚಾಲಕ ಪ್ರಶಸ್ತಿ ́ ಪಡೆದ ಚಾಲಕ ಅಲೆಕ್ಸಾಂಡರ್ ಕುಲಾಸೊ ನಿಧನ (Udupi) ಉಡುಪಿ: ಪರ್ಕಳ – ಮಟ್ಟು ರಸ್ತೆಯಲ್ಲಿ ಸಂಚರಿಸುತ್ತಿದ್ದ ಅಂಬರೀಶ್ ಬಸ್ ನಲ್ಲಿ 40ಕ್ಕೂ ಅಧಿಕ ವರ್ಷಗಳ ಕಾಲ ಚಾಲಕರಾಗಿ ನಿರಂತರವಾಗಿ ಸೇವೆ ಸಲ್ಲಿಸಿ, ‘ಅಪಘಾತ ರಹಿತ ಚಾಲಕ ಪ್ರಶಸ್ತಿ’ ಪುರಸ್ಕತರಾಗಿದ್ದ ಉದ್ಯಾವರದ ಅಲೆಕ್ಸಾಂಡರ್ ಕುಲಾಸೊ (75) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.    ಅತ್ಯಂತ ಸರಳ ಸ್ವಭಾವದವರಾಗಿದ್ದ ಕುಲಾಸೋರವರು, ಹಾಸ್ಯದ ಮಾತುಗಳ ಮೂಲಕವೇ ಎಲ್ಲರ ಮನ ಗೆಲ್ಲುತ್ತಿದ್ದರು. ಸಿಟಿ ಬಸ್ಸಿನ […]