# Tags

ಉಡುಪಿ :  ಶಾಲೆಗೆ ಅನಧಿಕೃತ ಗೈರು – ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಸಹಿತ ಇಬ್ಬರು ಶಿಕ್ಷಕರ ಅಮಾನತು

ಉಡುಪಿ : ಶಾಲೆಗೆ ಅನಧಿಕೃತ ಗೈರು – ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಸಹಿತ ಇಬ್ಬರು ಶಿಕ್ಷಕರ ಅಮಾನತು ಉಡುಪಿ : ಮೇಲಾಧಿಕಾರಿಗಳ ಅನುಮತಿ ಪಡೆಯದೆ ಅನಧಿಕೃತವಾಗಿ ನಿರಂತರ ಶಾಲೆಗೆ ಗೈರಾಗಿರುವ ಕಾರಣಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಗಳ್ಳಿ ಇಲ್ಲಿಯ ಸಹಶಿಕ್ಷಕ ಹಾಗೂ ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಮತ್ತು  ಗೈರಾಗಿರುವ ಬಗ್ಗೆ ಮೇಲಾಧಿಕಾರಿಗಳಿಗೆ ಮಾಹಿತಿ ನೀಡದೆ ಶಿಕ್ಷಕ ದಿನಕರ ಶೆಟ್ಟಿಗೆ ಬೆಂಬಲ ನೀಡಿದ ಕಾರಣಕ್ಕೆ ಮುಖ್ಯೋಪಾಧ್ಯಾಯ ಜನಾರ್ದನ […]

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ: ಕೆ.ಆರ್‌ ಪುರಂ ತಹಶೀಲ್ದಾರ್‌ ಅಜಿತ್‌ ರೈ ಅಮಾನತು

  ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಕೆ.ಆರ್‌. ಪುರಂ ತಹಶೀಲ್ದಾರ್‌ ಅಜಿತ್‌ ರೈ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಅನುಕಂಪದ ಆಧಾರದಲ್ಲಿ ಕಂದಾಯ ಇಲಾಖೆಯಲ್ಲಿ ಕೆಲಸ ಪಡೆದುಕೊಂಡಿದ್ದ ಅಜಿತ್‌ ರೈ, ನಂತರ ಹಲವು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಬಡ್ತಿ ಪಡೆದಿದ್ದರು. ಪ್ರಸ್ತುತ ಕೆ.ಆರ್‌. ಪುರಂನಲ್ಲಿ ತಹಶೀಲ್ದಾರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಆದಾಯಕ್ಕಿಂತ 69% ಹೆಚ್ಚುವರಿ ಆಸ್ತಿ ಹೊಂದಿರುವ ಆರೋಪದಲ್ಲಿ ಅಜಿತ್ ರೈ ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.