ಪಡುಬಿದ್ರಿ ಕೋಳಿ ಅಂಗಡಿಗೆ ಕನ್ನ; ಸಿಸಿಟಿವಿ ಯಲ್ಲಿ ಸೆರೆ
ಪಡುಬಿದ್ರಿ: ಇಲ್ಲಿನ ಕೆಳಗಿನಪೇಟೆಯ ರಾ.ಹೆ 66ರ ಪಕ್ಕದಲ್ಲಿರುವ ಕೋಳಿ ಅಂಗಡಿಯೊಂದಕ್ಕೆ ಕಳ್ಳನೊಬ್ಬ ಒಳ ನುಸುಳಿ ಸಾವಿರಾರು ರೂಪಾಯಿ ಕಳ್ಳತನ ಮಾಡಿ ಪರಾರಿಯಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಶನಿವಾರ ರಾತ್ರಿ ಸುಮಾರು 10:30ರ ವೇಳೆಗೆ ಅಂಗಡಿಯ ಹಿಂಭಾಗದಲ್ಲಿರುವ ಕೋಳಿ ಶೇಖರಣಾ ಕೊಠಡಿಯ ಎಗ್ಸಾಸ್ಟ್ ಫ್ಯಾನ್ ನ ರಂಧ್ರದೊಳಗಿಂದ ಒಳ ನುಸುಳಿರುವ ಕಳ್ಳ ಕ್ಯಾಶ್ ಕೌಂಟರ್ ನಲ್ಲಿ ಇರಿಸಲಾಗಿದ್ದ ಸಾವಿರಾರು ರೂಪಾಯಿಗಳನ್ನು ಎಗರಿಸಿದ್ದಾನೆ. ಅಂಗಡಿಯ ಎಗ್ಸಾಸ್ಟ್ ಫ್ಯಾನ್ ದುರಸ್ತಿಗೆಂದು ಕೊಡಲಾಗಿದ್ದು ಅದರ ಜಾಗದಲ್ಲಿ ರಂಧ್ರವಿದ್ದು ಮುಚ್ಚಲಾಗಿರಲಿಲ್ಲ. ಸಿಸಿಟಿವಿಯಲ್ಲಿ ಸೆರೆ: […]





