ಜಿಲ್ಲಾಡಳಿತ
ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi District Magistrate Vidyakumari K. transferred; Swaroopa TK as new DC
ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಕೆ. ವರ್ಗಾವಣೆ; ನೂತನ ಡಿಸಿಯಾಗಿ ಸ್ವರೂಪ ಟಿ.ಕೆ (Udupi) ಉಡುಪಿ : ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಅವರನ್ನು ರಾಜ್ಯ ಸರಕಾರ ವರ್ಗಾವಣೆಗೊಳಿಸಿದ್ದು, ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪ ಟಿ.ಕೆ. ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ. ಸ್ವರೂಪ ಟಿ.ಕೆ. ಈ ಹಿಂದೆ ಬೆಂಗಳೂರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ ಗವರ್ನೆನ್ಸ್ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಡಾ. ವಿದ್ಯಾ ಕುಮಾರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ ಎಂದು ತಿಳಿದು ಬಂದಿದೆ.

