Tag: UDUPI SP DR ARUN KUMAR

protest

ಉಡುಪಿ ಎಸ್ಪಿ ವಿರುದ್ಧ ಐವರು ಬಿಜೆಪಿ ಶಾಸಕರು ಮತ್ತು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ (Protest by Five MLAʼs and Hindu Organisations Against Udupi SP)

ಉಡುಪಿ ಎಸ್ಪಿ ವಿರುದ್ಧ ಐವರು ಬಿಜೆಪಿ ಶಾಸಕರು ಮತ್ತು ಹಿಂದೂ ಸಂಘಟನೆಗಳಿಂದ ಪ್ರತಿಭಟನೆ  (Udupi) ಉಡುಪಿ: ಉಡುಪಿ ಎಸ್ಪಿ ವಿರುದ್ಧ ಜಿಲ್ಲೆಯ ಐವರು ಬಿಜೆಪಿ ಶಾಸಕರು ಮತ್ತು ಹಿಂದೂ ಸಂಘಟನೆಗಳ ಸದಸ್ಯರು ಸೋಮವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಬಿಜೆಪಿಯ ಐವರು ಶಾಸಕರು ಭಾಗಿಯಾಗಿದ್ದು ವಿಶೇಷವಾಗಿತ್ತು. ಪ್ರಾರಂಭದಲ್ಲಿ ಎಸ್ಪಿ ಕಚೇರಿಯೆದುರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆದಿತ್ತು.ಈ ಹಿನ್ನೆಲೆಯಲ್ಲಿ ಎಸ್ ಪಿ ಕಚೇರಿ ಮುಂಭಾಗದಲ್ಲಿ ಭಾರಿ ಭದ್ರತೆ ಮಾಡಲಾಯಿತು. ಹಿಂದೂ ಜಾಗರಣ ವೇದಿಕೆ ಈ ಪ್ರತಿಭಟನೆ ನೇತೃತ್ವ ವಹಿಸಿತ್ತು. […]

ಅಪರಾಧ

  ದ್ವೇಷ ಭಾಷಣ : ಹಿಂದೂ ಜಾಗರಣ ವೇದಿಕೆ   ಮುಖಂಡನ ಮೇಲೆ ಪ್ರಕರಣ ದಾಖಲು (Hate speech : Case filed against Hindu jagrana Vedike Leader Shrikanth Shetty)

  ದ್ವೇಷ ಭಾಷಣ : ಹಿಂದೂ ಜಾಗರಣ ವೇದಿಕೆ  ಮುಖಂಡನ ಮೇಲೆ ಪ್ರಕರಣ ದಾಖಲು (Karkala) ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ನೇತಾರ ಕಾರ್ಕಳದ ಶ್ರೀಕಾಂತ್ ಶೆಟ್ಟಿಯ ಮೇಲೆ ದ್ವೇಷ ಭಾಷಣಕ್ಕಾಗಿ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ. ಶ್ರೀಕಾಂತ್‌ ಶೆಟ್ಟಿ, ಬೇರೆ ಬೇರೆ ಸಮುದಾಯಗಳ ನಡುವೆ ವೈರತ್ವ, ದ್ವೇಷ ಹಾಗೂ ವೈಮನಸ್ಸಿನ ಭಾವನೆಗಳನ್ನು ಉಂಟು ಮಾಡುವ ವೀಡಿಯೋವನ್ನು ಚಿತ್ರೀಕರಿಸಿ, ಅಶಾಂತಿ ಸೃಷ್ಠಿಸುವ ಉದ್ದೇಶದಿಂದ ವೀಡಿಯೋ ವೈರಲ್‌ ಮಾಡಿದ್ದಾರೆ ಎಂಬ ಆರೋಪದಡಿ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಅಪರಾಧ ಕ್ರಮಾಂಕ: […]

ಅಪರಾಧ

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್- ದೂರು ದಾಖಲು

ಉಡುಪಿ: ಜಿಲ್ಲಾಧಿಕಾರಿ ಹೆಸರಲ್ಲಿ ಫೇಕ್ ಫೇಸ್ ಬುಕ್ ಅಕೌಂಟ್- ದೂರು ದಾಖಲು (Udupi) ಉಡುಪಿ: ಉಡುಪಿ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅವರ ಹೆಸರಲ್ಲಿ  ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ಅವರು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಡಿಸಿ , ಪೇಸ್‌ಬುಕ್‌ ಸಾಮಾಜಿಕ ಜಾಲತಾಣದಲ್ಲಿ ನನ್ನ ಫೋಟೋ ದುರ್ಬಳಕೆ ಮಾಡಿಕೊಂಡು ಪೇಸ್‌ಬುಕ್‌ ಖಾತೆ ಸೃಜಿಸಿ Friend request  ಕಳುಹಿಸಿ ಹಣದ ಬೇಡಿಕೆ ಸಲ್ಲಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. […]

ಅಪಘಾತ

ತೆಕ್ಕಟ್ಟೆ ಬಳಿ ಭೀಕರ ಅಪಘಾತ: ಹಲವರಿಗೆ ಗಾಯ, ಇಬ್ಬರು ಗಂಭೀರ (Horrible accident near Thekkatte : Many injure, two seriously)

ತೆಕ್ಕಟ್ಟೆ ಬಳಿ ಭೀಕರ ಅಪಘಾತ: ಹಲವರಿಗೆ ಗಾಯ, ಇಬ್ಬರು ಗಂಭೀರ ಸಿಸಿ ಕ್ಯಾಮೆರಾದಲ್ಲಿ ಭೀಕರ ದೃಶ್ಯ ಸೆರೆ (Thekkatte) ತೆಕ್ಕಟ್ಟೆ: ಇನ್ನೋವಾ ಕಾರಿಗೆ ಹಿಂದಿನಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಕುಂಭಾಶಿ ಸಮೀಪ ಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಜೆ ಸಂಭವಿಸಿದೆ.  ಏಳು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಕೊಲ್ಲೂರು ದೇವರ ದರ್ಶನ ಮುಗಿಸಿ ಕೇರಳ ಕಡೆಗೆ […]

ಅಪರಾಧ

ಉಡುಪಿ : ಹುಟ್ಟೂರು ಕೂಡ್ಲುವಿನಲ್ಲಿ ನಕ್ಸಲ್ ವಿಕ್ರಂ ಗೌಡ ಮೃತದೇಹದ ಅಂತ್ಯಸಂಸ್ಕಾರ (Naxal Vikram Gaudaʼs dead body cremated home town Kudluru)

ಉಡುಪಿ : ಹುಟ್ಟೂರು ಕೂಡ್ಲುವಿನಲ್ಲಿ ನಕ್ಸಲ್ ವಿಕ್ರಂ ಗೌಡ ಮೃತದೇಹದ ಅಂತ್ಯ ಸಂಸ್ಕಾರ (Hebri) ಹೆಬ್ರಿ: ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್‌ ನಾಯಕ ವಿಕ್ರಂ ಗೌಡನ ಅಂತ್ಯ ಸಂಸ್ಕಾರ ಇಂದು ಹುಟ್ಟೂರು ಕೂಡ್ಲುವಿನಲ್ಲಿ ನೆರವೇರಿತು. ಇದಕ್ಕೂ ಮುನ್ನ ಮಣಿಪಾಲದಿಂದ ಅಂಬುಲೆನ್ಸ್‌ನಲ್ಲಿ ಕೂಡ್ಲುವಿಗೆ ಮೃತದೇಹ ರವಾನೆ ಮಾಡಲಾಯಿತು. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಕೂಡ್ಲು ಗ್ರಾಮದ ಮನೆ ಆವರಣದಲ್ಲಿ ಚಿತೆಗೆ ವಿಕ್ರಂ ಗೌಡ ಸಹೋದರ ಸುರೇಶ್ ಗೌಡ  ಬೆಂಕಿ ಇಟ್ಟರು. ಕೂಡ್ಲು […]

ಅಪರಾಧ

ನಕ್ಸಲ್ ವಿಕ್ರಂ ಗೌಡ ಮರಣೋತ್ತರ ಪರೀಕ್ಷೆ ಪೂರ್ಣ- ಇಂದು ಕುಟುಂಬಕ್ಕೆ ಮೃತದೇಹ ಹಸ್ತಾಂತರ (Postmortem of Naxal Vikaram Gauda complete – Body handed over to family today)

ನಕ್ಸಲ್ ವಿಕ್ರಂ ಗೌಡ ಮರಣೋತ್ತರ ಪರೀಕ್ಷೆ ಪೂರ್ಣ– ಇಂದು ಕುಟುಂಬಕ್ಕೆ ಮೃತದೇಹ ಹಸ್ತಾಂತರ (Manipala) ಮಣಿಪಾಲ: ಹೆಬ್ರಿಯ ಕಾಡಿನಲ್ಲಿ ನಕ್ಸಲ್ ನಿಗ್ರಹ ಪಡೆ ಪೊಲೀಸರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ನಕ್ಸಲ್‌ ನಾಯಕ ವಿಕ್ರಂ ಗೌಡನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಶವ ಪರೀಕ್ಷಾಗಾರಕ್ಕೆ ಮಂಗಳವಾರ ಸಂಜೆ ಸುಮಾರು 5 ಗಂಟೆಯ ವೇಳೆ ಪೊಲೀಸ್‌ ಭದ್ರತೆಯಲ್ಲಿ ಆ್ಯಂಬುಲೆನ್ಸ್‌ನಲ್ಲಿ ಮೃತ ದೇಹವನ್ನು ತರಲಾಯಿತು.    ಆದರೆ ತಡರಾತ್ರಿಯವರೆಗೂ ಮರಣೋತ್ತರ ಪರೀಕ್ಷೆ ನಡೆಯಲಿಲ್ಲ. ಮಂಗಳವಾರ ಸಂಜೆ ಆದರೂ ಮೃತರ ಮನೆ ಮಂದಿ ಬಾರದ […]

ಅಪರಾಧ

ಹೆಬ್ರಿಯಲ್ಲಿ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ (Naxal Leador Vikarm Gauda killed in an Police encounter in Hebri)

ಹೆಬ್ರಿಯಲ್ಲಿ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ  (Hebri) ಹೆಬ್ರಿ : ಪಶ್ಚಿಮ ಘಟ್ಟ ತಪ್ಪಲು ಪ್ರದೇಶವಾದ ಉಡುಪಿ ಜಿಲ್ಲೆಯ ಹೆಬ್ರಿ ಠಾಣಾ ವ್ಯಾಪ್ತಿಯ ಕಬ್ಬಿನಾಲೆಯಲ್ಲಿ ನಕ್ಸಲ್ ಎನ್​ಕೌಂಟರ್ ನಡೆದಿದೆ.  ನಕ್ಸಲ್ ನಾಯಕ ವಿಕ್ರಂ ಗೌಡನನ್ನು ನಕ್ಸಲ್ ನಿಗ್ರಹ ಪಡೆ ಎನ್​ಕೌಂಟರ್ ಮಾಡಿ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.  ಉಡುಪಿ ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಪ್ರಾರಂಭಗೊಂಡ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಕಳೆದ ಕೆಲವು ದಿನಗಳಿಂದ ತೀವ್ರಗೊಂಡಿತ್ತು. ಇದೇ ಹೊತ್ತಿಗೆ […]

ಅಪರಾಧ

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು (Lockup death in Brahmavara police Station : Suspension two including S.I)

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು (Brahmavara) ಬ್ರಹ್ಮಾವರ: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.   ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು (45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ […]

social service ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi Dist̤ Working Journalists Association got Udupi Dist. Rajyothsava award)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ (Udupi) ಉಡುಪಿ, ನ.01 : 25 ವರ್ಷಗಳನ್ನು ಪೂರೈಸಿ ರಜತ ಮಹೋತ್ಸವ ಸಂಭ್ರಮದಲ್ಲಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಶುಕ್ರವಾರ ಪ್ರದಾನ ಮಾಡಲಾಯಿತು.  ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಹಾಗೂ […]

fastival ಪ್ರಚಲಿತ

ಉಡುಪಿ – ಅದ್ದೂರಿ ರಾಜ್ಯೋತ್ಸವ ಕಾರ್ಯಕ್ರಮ

ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಪಥ ಸಂಚಲದಲ್ಲಿ ಗೌರವ ವಂದನೆ ಸ್ವೀಕರಿಸಿದರು. ಈ ವೇಳೆ ಉಡುಪಿ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, […]

eMedia Kannada  @2025. All Rights Reserved.