Tag: udupi

ಅಪರಾಧ ಕರಾವಳಿ

breaking news ಉಡುಪಿ ಸಂತೆಕಟ್ಟೆ ರಾಹೆ ೬೬ರ ಕಾಮಗಾರಿ ಸಂದರ್ಭ ಮಣ್ಣು ಕುಸಿತ

ಸಂತೆಕಟ್ಟೆ: ರಾಷ್ಟ್ರೀಯ ಹೆದ್ದಾರಿ 66 ಸಂತೆಕಟ್ಟೆಯಲ್ಲಿ ಒವರ್ ಪಾಸ್ ನಿರ್ಮಿಸುತ್ತಿದ್ದು ಈಗಾಗಲೇ ಈ ಕಾಮಗಾರಿ ಕುರಿತು ಅಪಸ್ವರ ಕೇಳಿ ಬರುತ್ತಿರುವ ಬೆನ್ನಲ್ಲೇ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿತ ಕಂಡಿದೆ. ಸಂಸದೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಒವರ್ ಪಾಸ್ ನಿರ್ಮಾಣಕ್ಕಾಗಿ ಅಗೆದಿರುವ  ಹೊಂಡವನ್ನು ಮಳೆಗಾಲದಲ್ಲಿ ಅಪಾಯವುಂಟಾಗಬಹುದೆಂದು ಮುಚ್ಚಲು ಆದೇಶಿಸಿದ್ದರು. ಆದರೆ ನಂತರ ಇಕ್ಕೆಲಗಳಲ್ಲಿ ಕಾಂಕ್ರೀಟಿಕರಣದ ಕಾಮಗಾರಿ ನಡೆಸಲಾಗುತ್ತಿದ್ದು, ಇದೀಗ ಕಾಮಗಾರಿ ನಡೆಸುತ್ತಿರುವ ಸಂದರ್ಭದಲ್ಲಿ ಒಂದು ಬದಿಯಲ್ಲಿ ಕುಸಿತ ಕಂಡಿದೆ‌. ನೂತನವಾಗಿ ನಿರ್ಮಿತವಾಗಿರುವ ಮಾಂಡವಿ ಕ್ರಾಸ್‌ ಗ್ರಾಂಡ್ ಅಪಾರ್ಟಿನ […]

ಕರಾವಳಿ

ಸಮಾಜದ ಚಿಂತನೆಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಿ – ಉಡುಪಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್

ಸಮಾಜದ ಚಿಂತನೆಯ ಜೊತೆಗೆ ತಮ್ಮ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಿ – ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ಉಡುಪಿ: ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಸಾಮರಸ್ಯ, ಸತ್ಯದ ಮೇಲೆ ಬೆಳಕು ಚೆಲ್ಲುವ ಕೆಲಸ ಮಾಡುತ್ತಿರುವ ಪತ್ರಕರ್ತರು ಕುಟುಂಬವನ್ನು ತ್ಯಜಿಸಿ ರಾತ್ರಿ-ಹಗಲೆನ್ನದೇ ದುಡಿಯುತ್ತಾರೆ. ಸಮಾಜದ ಒಳಿತಿಗಾಗಿ ಸದಾ ಚಿಂತಿಸುವ ಪತ್ರಕರ್ತರು ಅವರ ಮಕ್ಕಳ ಭವಿಷ್ಯದ ಬಗ್ಗೆಯೂ ಚಿಂತಿಸಬೇಕಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ […]

ಕರಾವಳಿ ಶಾಲಾ ಕಾಲೇಜು

ಉಡುಪಿ ಜಿಲ್ಲೆಯಲ್ಲಿ ಜುಲೈ 6 ರಂದು ಶಾಲೆಗಳಿಗೆ ರಜೆ : ರೆಡ್‌ ಅಲರ್ಟ್‌ ಘೋಷಣೆ

ಉಡುಪಿ :  ಕೃಷ್ಣನಗರಿ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಗುರುವಾರವೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್‌ ಅವರು ಆದೇಶ ಹೊರಡಿಸಿದ್ದಾರೆ.   ಉಡುಪಿ ಜಿಲ್ಲೆಯ ಬ್ರಹ್ಮಾವರ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅಲ್ಲದೇ ಗುರುವಾರವೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ […]

ಕರಾವಳಿ ಶಾಲಾ ಕಾಲೇಜು

ಭಾರಿ ಮಳೆ ಹಿನ್ನಲೆ – ಜುಲೈ 5ರಂದು ಉಡುಪಿ ಜಿಲ್ಲೆಯ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನಲೆ – ಜುಲೈ 5ರಂದು (ನಾಳೆ) ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶಾಲೆ, ಕಾಲೇಜುಗಳಿಗೆ ಜುಲೈ 5 ರಂದು ರಂದು ರಜೆ ಘೊಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಮಾಡಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದದ ಹಾಗೂ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜುಲೈ 4 ರಿಂದ 5 ರ ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೂರ್ಮ ರಾವ್ […]

Uncategorised

ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್

ವ್ಯಾಪಕ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಜಿಲ್ಲಾಧಿಕಾರಿ ಕೂರ್ಮ ರಾವ್ ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಹವಮಾನ ಇಲಾಖೆಯಿಂದ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು […]

ವಿಡಿಯೋ

ಅಕ್ಕಿ ವಿತರಣೆಯಲ್ಲಿ ಕಾಂಗ್ರೆಸ್‌ ನದ್ದು 50 ಪರ್ಸೆಂಟ್ ಗ್ಯಾರಂಟಿ ಸರಕಾರ ; ಕೋಟಾ ಶ್ರೀನಿವಾಸ್ ಪೂಜಾರಿ

ಉಡುಪಿ: ಅಕ್ಕಿ ಕೊಡುವ ಭರವಸೆ ನೀಡಿದ್ದೀರಿ. ಆದರೆ ಈಗ 5 ಕೆಜಿ ಅಕ್ಕಿಯ ಹಣ ನೀಡಲು ತೀರ್ಮಾನ ಮಾಡಿದ್ದೀರಿ. ಹಾಗಾದರೆ ನಿಮ್ಮದು 50 ಪರ್ಸೆಂಟ್ ಗ್ಯಾರಂಟಿ ಸರ್ಕಾರವಾ ಎಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಕೋಟಾ ಶ್ರೀನಿವಾಸ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಚಿವರು, ಕೇಂದ್ರ ಸರಕಾರ ಬಿಪಿಎಲ್ ಇರುವವರಿಗೆ ಪ್ರತಿಯೊಬ್ಬರಿಗೂ ಐದು ಕೆಜಿ ಅಕ್ಕಿ ನೀಡುತ್ತಿದೆ.ಇದಕ್ಕೆ ಒಂದು ತಿಂಗಳಿಗೆ ಕೇಂದ್ರ ಸರಕಾರಕ್ಕೆ 18ರಿಂದ 19 ಸಾವಿರ ಕೋಟಿ ಖರ್ಚಾಗುತ್ತದೆ. ತೆಲಂಗಾಣದಲ್ಲಿ […]

Uncategorised ಕರಾವಳಿ

ಉಡುಪಿ ಮಠಾಧೀಶರುಗಳಿಂದ ತಪ್ತ ಮುದ್ರಾಧಾರಣೆ

ಉಡುಪಿ: ಶ್ರೀ ಕೃಷ್ಣಮಠದಲ್ಲಿ ಗುರುವಾರ ಹರಿ ಶಯನೀ ಏಕಾದಶಿಯಂದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ  ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯರು  ಸುದರ್ಶನ ಹೋಮದ ಪೂರ್ಣಾಹುತಿ ನಡೆಸಿದರು.  ಪರ್ಯಾಯ  ಶ್ರೀಪಾದರು ಮುದ್ರಾಧಾರಣೆಯನ್ನು ಮಾಡಿಕೊಂಡು ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರಿಗೆ ಪರ್ಯಾಯ ಶ್ರೀಪಾದರು  ಮುದ್ರಾಧಾರಣೆಯನ್ನು ನಡೆಸಿದರು. ನಂತರ ಆಗಮಿಸಿದ ಸಹಸ್ರಾರು ಭಕ್ತಾದಿಗಳಿಗೆ ಪರ್ಯಾಯ ಶ್ರೀ ಪಾದರು, ಕಾಣಿಯೂರು ಶ್ರೀಪಾದರು,ಅದಮಾರು ಕಿರಿಯ […]

ಕರಾವಳಿ

ಉಡುಪಿ :  ನವೀಕಕೃತ ಶ್ರೀ ಕೃಷ್ಣ ಛತ್ರ  ಕೃಷ್ಣಾರ್ಪಣ

ಉಡುಪಿ :ಪರ್ಯಾಯ ಶ್ರೀ‌ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ತಮ್ಮ ಚತುರ್ಥ ಶ್ರೀ ಕೃಷ್ಣ ಪೂಜಾ ಪರ್ಯಾಯ ಅವಧಿಯಲ್ಲಿ ಕೆನರಾ ಬ್ಯಾಂಕ್ ಮತ್ತು ಭಕ್ತರ ನೆರವಿನೊಂದಿಗೆ ಶ್ರೀ ಕೃಷ್ಣಮಠದ ರಾಜಾಂಗಣಕ್ಕೆ ಹೊಂದಿಕೊಂಡು ಇರುವ  ನವೀಕೃತ ಶ್ರೀ ಕೃಷ್ಣ ಛತ್ರವನ್ನು ಇತರೆ ಮಠಾಧೀಶರ ಉಪಸ್ಥಿತಿಯಲ್ಲಿ ಬುಧವಾರ ಶ್ರೀ ಕೃಷ್ಣನಿಗೆ ಸಮರ್ಪಿಸಿದರು .ಸದ್ರಿ ಛತ್ರವು 1966 ರಲ್ಲಿ ಆಗಿನ ಶ್ರೀಶೀರೂರು ಮಠಾಧೀಶರಿಂದ ನಿರ್ಮಸಲ್ಪಟ್ಟು ಪ್ರಸ್ತುತ ಶಿಥಿಲಗೊಂಡಿತ್ತು . ಇದೀಗ ಸಮಾರು 3.5 ಕೋಟಿ ರೂ ವೆಚ್ಚದಲ್ಲಿ ಸಂಪೂರ್ಣ ನವೀಕರಿಸಲಾಗಿದೆ .ಇದರಲ್ಲಿ […]

ಅಪರಾಧ

ವಿದ್ಯಾರ್ಥಿನಿಯ ಸಂಶಯಾಸ್ಪದ ಸಾವು – ಎಬಿವಿಪಿಯಿಂದ ಉಡುಪಿಯಲ್ಲಿ ಪ್ರತಿಭಟನೆ

ಕಾಪು ತಾಲೂಕಿನ ಎಲ್ಲೂರು ಕೆಮ್ಮುಂಡೇಲು ನಿವಾಸಿ ನಿಕಿತಾ ಎಂಬ ವಿದ್ಯಾರ್ಥಿನಿಯು ಆಸ್ಪತ್ರೆಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಎಬಿವಿಪಿ ಸಂಘಟನೆ ಇಂದು ಉಡುಪಿಯಲ್ಲಿ ಆಸ್ಪತ್ರೆಗೆ ಮುತ್ತಿಗೆ ಹಾಕಲು ಯತ್ನಿಸಿತು. ನಿಕಿತಾ ಸಾವಿಗೀಡಾದ ಉಡುಪಿಯ ಸಿಟಿ ಹಾಸ್ಪಿಟಲ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ , ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಹಿನ್ನೆಲೆಯಲ್ಲಿ ಆಸ್ಪತ್ರೆ ಮುಂದೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಬಂದ ವಿದ್ಯಾರ್ಥಿಗಳನ್ನು ಪೊಲೀಸರು ರಸ್ತೆಯಲ್ಲೇ ತಡೆದು ನಿಲ್ಲಿಸಿದರು. ಈ ವೇಳೆ […]

eMedia Kannada  @2025. All Rights Reserved.