Tag: udupi

ರಾಜಕೀಯ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ , ಉಡುಪಿ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ ಪಾಟೀಲ್, ಮೈಸೂರಿಗೆ ಹೆಚ್.ಸಿ ಮಹದೇವಪ್ಪ, ಬೆಳಗಾವಿಗೆ ಸತೀಶ್ ಜಾರಕಿಹೊಳಿ, ಕಲಬುರ್ಗಿಗೆ ಪ್ರಿಯಾಂಕಾ ಖರ್ಗೆ, ಹಾವೇರಿಗೆ ಶಿವಾನಂದ ಪಾಟೀಲ್, […]

ವ್ಯವಹಾರ

ಶ್ರೀಮಾ ರೈಗೆ ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್

ಉಡುಪಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಸ್ಮರಣಾರ್ಥವಾಗಿ ಕೊಡಲ್ಪಡುವ ‘ರಾಜೀವ್ ಗಾಂಧಿ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್ -2023’ಕ್ಕೆ ಡಿಜಿಟಲ್ ಕಂಟೆಂಟ್ ಕ್ರಿಯೇಟರ್ ಶ್ರೀಮಾ ರೈ ಭಾಜನರಾಗಿದ್ದಾರೆ. ಪುತ್ತೂರಿನ ಬೆಳ್ಳಿಪ್ಪಾಡಿ ಕುಟುಂಬ ಟ್ರಸ್ಟ್‌ನ ಅಧ್ಯಕ್ಷ ನೇಮಿರಾಜ್ ರೈ ಮತ್ತು ನಿಟ್ಟೆಗುತ್ತು ವಿಶಾಲಿ ಎನ್. ರೈ ದಂಪತಿ ಪುತ್ರಿಯಾಗಿರುವ ಇವರು, ಮೆರೈನ್ ಇಂಜಿನಿಯರಿಂಗ್ ಕನ್ಸಲ್ವೆನ್ಸಿ ಕಂಪನಿಯನ್ನು ಮುನ್ನಡೆಸುತ್ತಿರುವ ಆದಿತ್ಯ ರೈ ಅವರ ಪತ್ನಿ. ಇವರಿಗೆ ಇಬ್ಬರು ಪುತ್ರರು ಇದ್ದಾರೆ. ಮಿಸೆಸ್ ಇಂಡಿಯಾ ಗ್ಲೋಬ್ 2009 ಕಿರೀಟವನ್ನು ಮುಡಿಗೇರಿಸಿರುವ ಶ್ರೀಮಾ […]

ಕರಾವಳಿ ಜೀವನಶೈಲಿ ವ್ಯವಹಾರ

ಉಡುಪಿ: ಜೂ. 11- ಮಿನಿ ಉದ್ಯೋಗ ಮೇಳ

ಉಡುಪಿ: ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಕೊಡವೂರು ವಾರ್ಡ್ ಅಭಿವೃದ್ದಿ ಸಮಿತಿ ಹಾಗೂ ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘ ಇವರ ಜಂಟಿ ಆಶ್ರಯದಲ್ಲಿ ಜೂನ್ 11ರಂದು ಬೆಳಿಗ್ಗೆ 10 ಗಂಟೆಯಿಂದ ಕೊಡವೂರು ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಮಿನಿ ಉದ್ಯೋಗ ಮೇಳವನ್ನು ನಡೆಸಲಾಗುವುದು ಎಂದು ಮಿತೇಶ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9137386752 ಸಂಖ್ಯೆಯನ್ನು ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಪರಾಧ ಕರಾವಳಿ

ಉಡುಪಿ:  ಎಸೆಸೆಲ್ಸಿ ಪೂರಕ ಪರೀಕ್ಷೆ- ನಿಷೇಧಾಜ್ಞೆ

ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪೂರಕ ಪರೀಕ್ಷೆಗಳು ಜೂನ್ 12ರಿಂದ 17ರವರೆಗೆ ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಸೆಕ್ಷನ್ 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

ಕರಾವಳಿ

ಉಜ್ವಾಡ್ ಪತ್ರಿಕೆಯ ನೂತನ ಸಂಪಾದಕರಾಗಿ ವಂ ಆಲ್ವಿನ್ ಸಿಕ್ವೇರಾ ಅಧಿಕಾರ ಸ್ವೀಕಾರ

ಉಜ್ವಾಡ್ ಪತ್ರಿಕೆಯ ನೂತನ ಸಂಪಾದಕರಾಗಿ ವಂ ಆಲ್ವಿನ್ ಸಿಕ್ವೇರಾ ಅಧಿಕಾರ ಸ್ವೀಕಾರ ಉಡುಪಿ: ಧರ್ಮಪ್ರಾಂತ್ಯದ ಪಾಕ್ಷಿಕ ಪತ್ರಿಕೆ ಉಜ್ವಾಡ್ ಇದರ ನೂತನ ಸಂಪಾದಕರಾಗಿ ವಂ ಆಲ್ವಿನ್ ಸಿಕ್ವೇರಾ ಅವರು ಅಧಿಕಾರ ವಹಿಸಿಕೊಂಡರು. ಕಕ್ಕುಂಜೆ ಅಂಬಾಗಿಲು ಬಳಿಯ ಅನುಗ್ರಹ ಪಾಲನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮನ ಸಂಪಾದಕರಾದ ವಂ| ರೊಯ್ಸನ್ ಫೆರ್ನಾಂಡಿಸ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಉಜ್ವಾಡ್ ಪತ್ರಿಕೆಯು ದೀಪಾ ಟ್ರಸ್ಟ್ ಅಡಿಯಲ್ಲಿ ಪ್ರಕಟಗೊಳ್ಳುತ್ತಿದ್ದು, ಪ್ರಕಾಶಕರು ಹಾಗೂ ಧರ್ಮಪ್ರಾಂತ್ಯದ ವಿಕಾರ್ ಜನರಲ್ ವಂ. ಫರ್ಡಿನಾಂಡ್ ಗೊನ್ಸಾಲ್ವಿಸ್ ಅವರು ನೂತನ ಸಂಪಾದಕರಿಗೆ […]

ರಾಜಕೀಯ

ಪಠ್ಯಪುಸ್ತಕ ಬದಲಿಸುವ ದುಸ್ಸಾಹಸಕ್ಕೆ ಕೈ ಹಾಕಬೇಡಿ: ಉಡುಪಿಯಲ್ಲಿ  ಮಾಜಿ ಸಚಿವ ಸುನಿಲ್ ಕುಮಾರ್

ಉಡುಪಿ : ಅಧಿಕಾರಕ್ಕೆ ಬಂದ ಕೇವಲ ಒಂದು ತಿಂಗಳ ಒಳಗೆ ಬಿಜೆಪಿ ಸರಕಾರದ ಎಲ್ಲವನ್ನೂ ಬದಲಿಸಲು ಸರಕಾರ ಹೊರಟಿದೆ. ಪಠ್ಯಪುಸ್ತಕ ಪರಿಷ್ಕರಣೆಯನ್ನು ಬಿಜೆಪಿ ಸರಕಾರ ಮಾಡಿದ್ದು, ಅದನ್ನು ಮತ್ತೆ ಬದಲಿಸುವ ದುಸ್ಸಾಹಸಕ್ಕೆ ಕಾಂಗ್ರೆಸ್ ಸರಕಾರ ಕೈಹಾಕಬಾರದು ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.  ಆರೆಸ್ಸೆಸ್ ಸಂಸ್ಥಾಪಕ ಹೆಗಡೆವಾರ್ ಪಠ್ಯವನ್ನು ಕೈಬಿಡುವ ಸರಕಾರದ ಕ್ರಮದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಪಠ್ಯ ಪುಸ್ತಕದಲ್ಲಿ ರಾಷ್ಟ್ರೀಯವಾದಿ ವಿಚಾರಗಳನ್ನು ನಾವು ಸೇರಿಸಿದ್ದೇವೆ. ದೇಶದ ಸಂಸ್ಕೃತಿಯನ್ನು ಬಿಂಬಿಸುವ ವಿಚಾರಗಳನ್ನು ಅಳವಡಿಸಿದ್ದೇವೆ. ಅದನ್ನು […]

ರಾಜಕೀಯ

ಬಿಜೆಪಿ ಸರಕಾರ ಗೋವುಗಳ ಸಂರಕ್ಷಣೆಗಾಗಿ‌ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತಂದಿದೆ: ಕೋಟ

  ಉಡುಪಿ: ಗೋವುಗಳನ್ನು ಕಡಿದರೆ ಏನಾಗುತ್ತದೆ ಎಂಬ ರಾಜ್ಯ ಪಶುಸಂಗೋಪನೆ ಸಚಿವರ ಹೇಳಿಕೆಗೆ ಮಾಜಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ಸರಕಾರ ಗೋವುಗಳ ಸಂರಕ್ಷಣೆಗಾಗಿ‌ ಮತ್ತು ಕೃಷಿಕರ ಅನುಕೂಲಕ್ಕಾಗಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ತಂದಿದೆ. ಸಾಧು ಸಂತರ ಅಭಿಪ್ರಾಯಗಳಿಗೆ ಅನುಗುಣವಾಗಿ ಈ ಕಾಯಿದೆ ತರಲಾಗಿದೆ. ಆದರೆ ಸಚಿವರ ಈ ಹೇಳಿಕೆ ಆಶ್ಚರ್ಯ ತಂದಿದೆ. ಮುಖ್ಯಮಂತ್ರಿಗಳು ತಮ್ಮ ಸಚಿವರನ್ನು ಕರೆದು ಈ […]

ರಾಜಕೀಯ

ಗೃಹ ಜ್ಯೋತಿ ಯೋಜನೆ ಕುರಿತು ಬಾಡಿಗೆದಾರರಲ್ಲಿ ಬಿಜೆಪಿ ಗೊಂದಲ ಮೂಡಿಸುತ್ತಿದೆ – ಜಿ ಪರಮೇಶ್ವರ್

ಉಡುಪಿ: ಗೃಹ ಜ್ಯೋತಿ ಯೋಜನೆ ಬಗ್ಗೆ ಸರ್ಕಾರ ಎಲ್ಲವನ್ನು ಸ್ಪಷ್ಟವಾಗಿ ಹೇಳಿದೆ. ಬಾಡಿಗೆದಾರರಲ್ಲಿ ಗೊಂದಲ ಉಂಟು ಮಾಡುತ್ತಿರುವುದು ಬಿಜೆಪಿಯವರು ಎಂದು ಗೃಹ ಸಚಿವ ಜಿ. ಪರಮೇಶ್ವರ್  ಕಿಡಿಕಾರಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಷ್ಟೇ ಹಣ ಖರ್ಚಾಗುತ್ತೆ ಎಂಬುದನ್ನು ಗಮನಿಸಿ ಸ್ಪಷ್ಟ ತೀರ್ಮಾನ ಕೈಗೊಂಡಿದ್ದೇವೆ. ಬಿಪಿಎಲ್ ಎಪಿಎಲ್ ಯಾವುದೇ ವರ್ಗೀಕರಣ ಮಾಡಿಲ್ಲ. ಮುಖ್ಯಮಂತ್ರಿಗಳು ಎಲ್ಲ ವಿಚಾರವನ್ನು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಹೇಳಿದರು. 12 ತಿಂಗಳ ಸರಾಸರಿ ತೆಗೆದುಕೊಳ್ಳುತ್ತೇವೆ, ಶೇಕಡ 10 ಸೇರ್ಪಡೆ ಮಾಡುತ್ತೇವೆ. ಶೇಕಡ 10 […]

ರಾಜಕೀಯ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

 ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಟ್, ನಗರ ಮಂಡಲದ ಬಿಜೆಪಿ ಅಧ್ಯಕ್ಷರಾದ ಶ್ರೀ ಮಹೇಶ್ ಠಾಕೂರ್,  ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಶ್ರೀ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ದಿನಕರ ಬಾಬು, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಮತ್ತು ಸುಮಿತ್ರಾ ನಾಯಕ್, […]

ರಾಜಕೀಯ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆಯಲ್ಲಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿದರು.

 ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕರಾದ ಶ್ರೀ ಕೆ ರಘುಪತಿ ಭಟ್, ನಗರ ಮಂಡಲದ ಬಿಜೆಪಿ ಅಧ್ಯಕ್ಷರಾದ ಶ್ರೀ ಮಹೇಶ್ ಠಾಕೂರ್,  ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಶ್ರೀ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಎಸ್ ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ದಿನಕರ ಬಾಬು, ನಗರಸಭೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಮತ್ತು ಸುಮಿತ್ರಾ ನಾಯಕ್, […]

eMedia Kannada  @2025. All Rights Reserved.