Tag: udupi

ಕರಾವಳಿ

ಕ.ಸಾ.ಪ ಉಡುಪಿ ಜಿಲ್ಲೆ ಕಿರುಚಿತ್ರ ರಚನಾ ಕಮ್ಮಟ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ವತಿಯಿಂದ ಡಾ| ಶಿವರಾಮ ಕಾರಂತ ಪ್ರತಿಷ್ಟಾನ, ಟ್ರಸ್ಟ್ ಸಹಯೋಗದಲ್ಲಿ ಕೋಟ ಕಾರಂತ ಥೀಮ್ ಪಾಕ್೯ ನಲ್ಲಿ ಜೂನ್ 4 ಆದಿತ್ಯವಾರ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ 139 ನೇ ಜನ್ಮದಿನಾಚರಣೆ ಅಂಗವಾಗಿ ಕಿರುಚಿತ್ರ ರಚನಾ ಕಮ್ಮಟ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ನಡೆಯಿತು. ಕಾಯ೯ಕ್ರಮವನ್ನು ಕೋಟತಟ್ಟು ಗ್ರಾ.ಪಂ ಅಧ್ಯಕ್ಷೆ ಅಶ್ವಿನಿ ದಿನೇಶ್ ಉದ್ಘಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಕ .ಸಾ.ಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು. […]

ಕರಾವಳಿ ರಾಜಕೀಯ

ಗ್ಯಾರಂಟಿ ಅನುಷ್ಠಾನಕ್ಕೆ ಕುಂದಾಪುರ ಕಾಂಗ್ರೆಸ್ ಹರ್ಷ

ಕುಂದಾಪುರ: ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ್ದ ಐದು ಗ್ಯಾರೆಂಟಿಗಳನ್ನು ಅನುಷ್ಠಾನ ಘೋಷಣೆ ಮಾಡಿರುವುದನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸ್ವಾಗತಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿಯವರು, ಬಿಜೆಪಿ ಮುಖಂಡರು ಗ್ಯಾರಂಟಿ ಬಗ್ಗೆ ಟೀಕೆ ಮತ್ತು ಲೇವಡಿ ಮಾಡಿ ಗ್ಯಾರಂಟಿಗೆ ವಾರಂಟಿ ಇಲ್ಲ ಮತ್ತು ಗ್ಯಾರಂಟಿ ಪುಸ್ತಕದೊಳಗಿನ ನವಿಲಗರಿ ಎಂದಿದ್ದರು. ಆದರೆ ಕಾಂಗ್ರೆಸ್ ನಡೆದಂತೆ ನುಡಿಯುವ ಪಕ್ಷ ಎಂದಿದ್ದಾರೆ. ಪ್ರಥಮ ಸಂಪುಟ ಸಭೆಯಲ್ಲಿ […]

ಕರಾವಳಿ ಜೀವನಶೈಲಿ ವ್ಯವಹಾರ

ಉಡುಪಿಯಲ್ಲಿ ರಾಷ್ಟ್ರೀಯ ಲೋಕ್ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ವತಿಯಿಂದ ರಾಜ್ಯಾದ್ಯಂತ 2023 ರ ಜುಲೈ 8 ರಂದು ರಾಷ್ಟ್ರೀಯ ಲೋಕ್ ಅದಾಲತ್/ ಮೆಗಾ ಲೋಕ್ ಅದಾಲತ್‌ನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಈ ಮೂಲಕ ತಕ್ಷಣ ಪರಿಹಾರ ಕಂಡುಕೊಳ್ಳಬಹುದಾಗಿದೆ.  ಅದಾಲತ್‌ನಲ್ಲಿ ಸಾರ್ವಜನಿಕರು ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ […]

ರಾಜಕೀಯ ವ್ಯವಹಾರ

ಗ್ಯಾರಂಟಿ ಯೋಜನೆಯಲ್ಲಿ ಬಿಜೆಪಿ ರಾಜಕೀಯ – ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜಕೀಯ ಮಾಡುತ್ತಿರುವ ಬಿಜೆಪಿ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಅವರು ಹೇಳಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು, ಕುಯಿಲಾಡಿ ಸುರೇಶ್ ನಾಯಕ್ ಅವರು ಬಸ್ ಮಾಲಕರ ಸಂಘದ ಜಿಲ್ಲಾಧ್ಯಕ್ಷ, ಅದೇ ರೀತಿ ಉಡುಪಿಯ ಬಿಜೆಪಿ ಜಿಲ್ಲಾಧ್ಯಕ್ಷರೂ ಕೂಡ ಆಗಿರುತ್ತಾರೆ. ಆದರೂ ಕೊರೋನಾ ಸಮಯದಲ್ಲಿ ಬಸ್‌ನ ಟಿಕೆಟ್ ದರ ಏರಿಕೆಯನ್ನು ಮಾಡಿದ್ದರು. ಅವರದ್ದೇ ಸರಕಾರ ಇದ್ದರೂ ಬೆಲೆ ಏರಿಕೆ ಕಡಿಮೆ ಮಾಡಿಲ್ಲ. ಟೋಲ್ […]

ಕರಾವಳಿ ತಂತ್ರಜ್ಞಾನ ವ್ಯವಹಾರ

ಜೂನ್ 7 ರಂದು ಅಂಚೆ ಅದಾಲತ್

ಉಡುಪಿ: ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜೂನ್ 7 ರಂದು ಅಂಚೆ ಅದಾಲತ್ ನಡೆಯಲಿದ್ದು, ಅಂಚೆ ಗ್ರಾಹಕರು ತಮ್ಮ ದೂರು ಮತ್ತು ಸಲಹೆಗಳನ್ನು ಜೂನ್ 5 ರೊಳಗೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬಹುದು ಅಥವಾ ಅಂಚೆ ಅದಾಲತ್ ನಡೆಯುವ ದಿನದಂದು ಹಾಜರಿದ್ದು ಚರ್ಚಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು ಎಂದು ಉಡುಪಿ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾವಳಿ ರಾಜಕೀಯ ವ್ಯವಹಾರ

ಉಡುಪಿಯಲ್ಲಿ ಬಿಜೆಪಿ ಕ್ಷೇತ್ರದ ಅವಲೋಕನ ಸಭೆ

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರದ ಅವಲೋಕನ ಸಭೆ ಶನಿವಾರ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿದ್ದರು. ಅವಲೋಕನ ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ   ಮೋನಪ್ಪ ಭಂಡಾರಿ, ನಿಕಟಪೂರ್ವ ಶಾಸಕರಾದ  ಕೆ ರಘುಪತಿ ಭಟ್, ನಗರ ಮಂಡಲದ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್,  ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀಮತಿ ವೀಣಾ ನಾಯ್ಕ್, ಕ್ಷೇತ್ರ ಚುನಾವಣಾ ಉಸ್ತುವಾರಿ ಗಣೇಶ್ ಹೊಸಬೆಟ್ಟು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ […]

ಆಹಾರ ವ್ಯವಹಾರ

ಉಡುಪಿ ಜಿಲ್ಲೆಯಲ್ಲಿ ಬೀಟ್ ದಿ ಪ್ಲಾಸ್ಟಿಕ್ ಜಾಗೃತಿ ಅಭಿಯಾನ

ಉಡುಪಿ ಜಿಲ್ಲೆಯಲ್ಲಿ ಬೀಟ್ ದಿ ಪ್ಲಾಸ್ಟಿಕ್ ಜಾಗೃತಿ ಅಭಿಯಾನ  ಉಡುಪಿ, ಜೂನ್ 03 : ರಾಜ್ಯದ ಕರಾವಳಿ ಭಾಗದಲ್ಲಿ  ಪ್ಲಾಸ್ಟಿಕ್ ಅನ್ನು ತಿರಸ್ಕರಿಸಿ, ಕಡಿಮೆ ಮಾಡಿ, ಮರುಬಳಕೆ ಮಾಡಿ ಮತ್ತು ಮರುಬಳಕೆ ಮಾಡಿ ಎಂಬ ವಿಶಿಷ್ಟ ಘೋಷಣೆಯೊಂದಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ ಮೇ 27 ರಂದು ಕಾರವಾರದಿಂದ ಆರಂಭವಾದ ಬೀಟ್ ದಿ ಪ್ಲಾಸ್ಟಿಕ್ ಜಾಗೃತಿ ಅಭಿಯಾನ ಯಾತ್ರೆಯು ಕರಾವಳಿಯ ವಿವಿಧ ಭಾಗಗಳಿಗೆ ಸಂಚರಿಸಿದ್ದು, ಇದುವರೆಗೆ ಕಾರವಾರ, ಗೋಕರ್ಣ, ಕುಮಟಾ, ಹೊನ್ನಾವರ, ಮುರ್ಡೇಶ್ವರ, ಬೈಂದೂರು, […]

ಕರಾವಳಿ ಜೀವನಶೈಲಿ

ಉಡುಪಿ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ರಘುಪ್ರವೀರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ

ಉಡುಪಿ ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಶ್ರೀ ಪಾದರಾಜರ ಆರಾಧನಾ ಪ್ರಯುಕ್ತ ರಘುಪ್ರವೀರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕರಾವಳಿ

ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಪಾದರಾಜರ ಆರಾಧನಾ ಮಹೋತ್ಸವ

ಉಡುಪಿಯ ಶ್ರೀಕೃಷ್ಣಮಠದಲ್ಲಿ, ಶ್ರೀಪಾದರಾಜರ ಆರಾಧನಾ ಮಹೋಥಶೌಧ ವೈಭವದೊಂದಿಗೆ ಮೆರವಣಿಗೆ ನಡೆಯಿತು. ಪ್ರಯುಕ್ತ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ  ಶ್ರೀಪಾದರ ಉಪಸ್ಥಿತಿಯಲ್ಲಿ ರಥಬೀದಿಯಲ್ಲಿ ಸುವರ್ಣರಥದಲ್ಲಿ ಶ್ರೀಪಾದರಾಜರ ಗ್ರಂಥ ಮತ್ತು ಭಾವಚಿತ್ರವನ್ನಿಟ್ಟು ವೈಭವದೊಂದಿಗೆ ಮೆರವಣಿಗೆ ನಡೆಯಿತು.

ಕರಾವಳಿ ದೇಶ-ವಿದೇಶ ರಾಜಕೀಯ

ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದನನ್ನು ಬಂಧಿಸಿ- ಉಡುಪಿ ಮಹಿಳಾ ಕಾಂಗ್ರೆಸ್ ಆಗ್ರಹ

ಉಡುಪಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬೃಜ್ ಭೂಷಣ್ ಶರಣ್ ಸಿಂಗ್ ಅವರನ್ನು ತಕ್ಷಣ ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಒತ್ತಾಯಿಸಿದ್ದಾರೆ.  ಉಡುಪಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದ ಬೃಜ್ ಭೂಷಣ್ ಸಿಂಗ್ ತಕ್ಷಣ ತನ್ನ ಹುದ್ದೆಗೆ ರಾಜೀನಾಮೆ ನೀಡಬೇಕು.  ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ […]

eMedia Kannada  @2025. All Rights Reserved.