Tag: udupi

ಕರಾವಳಿ ಪ್ರಚಲಿತ

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ:  ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ ಬೆಂಗಳೂರು: ‌ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟೀಸ್ […]

ಕರಾವಳಿ ಜೀವನಶೈಲಿ ವಿಡಿಯೋ

ಸ್ಪೀಕರ್‌ ಯುಟಿ ಖಾದರ್‌ ಉಡುಪಿ ಶ್ರೀ ಕೃಷ್ಣ ಮಠ ಭೇಟಿ, ಪ್ರಸಾದ ಸ್ವೀಕಾರ

ಸ್ಪೀಕರ್‌ ಯುಟಿ ಖಾದರ್‌ ಉಡುಪಿ ಶ್ರೀ ಕೃಷ್ಣ ಮಠ ಭೇಟಿ, ಪ್ರಸಾದ ಸ್ವೀಕಾರ  ಶ್ರೀಕೃಷ್ಣ ಜನಿಸಿದ ಮಧ್ಯರಾತ್ರಿ ಸಮಯದಲ್ಲೇ ಉಡುಪಿ ಕೃಷ್ಣ ಮಠಕ್ಕೆ ಆಕಸ್ಮಿಕವಾಗಿ ಭೇಟಿ ನೀಡಿ ಅಚ್ಚರಿ ಮೂಡಿಸಿದ ಸ್ಪೀಕರ್‌ ಖಾದರ್‌ ಉಡುಪಿ: ಎಲ್ಲೆಲ್ಲೂ ಕೃಷ್ಣಾಷ್ಟಮಿಯ ಸಂಭ್ರಮ, ಸಡಗರ. ಉಡುಪಿ ಶ್ರೀಕೃಷ್ಣ ಮಠದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಈ ಸಂದರ್ಭ ನಡೆಯುತ್ತವೆ. ಭಗವಾನ್ ಶ್ರೀಕೃಷ್ಣ ಮಥುರಾದಲ್ಲಿ ಮಧ್ಯರಾತ್ರಿ ಜನಿಸಿದ್ದು ಇತಿಹಾಸ. ಅದೇ ಮಧ್ಯರಾತ್ರಿಯ ಸಮಯ, ಅದೇ ಗಳಿಗೆಯಲ್ಲಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಶಾಸಕರೊಬ್ಬರು ದೈವ ಸಂಕಲ್ಪ […]

ಕರಾವಳಿ ವಿಡಿಯೋ

ಕೃಷ್ಣ ಜನ್ಮಾಷ್ಟಮಿ ಸಂದರ್ಭ ಬಳಸುವ ಪೇಟ್ಲ ತಯಾರಿಯಲ್ಲಿ ಕಾಪುವಿನ ಪ್ರಶಾಂತ್‌ ಎಕ್ಸ್ಪರ್ಟ್‌ 

ಕೃಷ್ಣ ಜನ್ಮಾಷ್ಟಮಿ ಸಂದರ್ಭ ಬಳಸುವ ಪೇಟ್ಲ ತಯಾರಿಯಲ್ಲಿ ಕಾಪುವಿನ ಪ್ರಶಾಂತ್‌ ಎಕ್ಸ್ಪರ್ಟ್‌  ಕಾಪು: ಉಡುಪಿಯಲ್ಲಿ ಆಚರಿಸುವ ಶ್ರೀ ಕೃಷ್ಣ ಜನ್ಮಾಷ್ಟಮಿ ಹತ್ತು ಹಲವು ವಿಶೇಷತೆಗಳಿಗೆ ಹೆಸರುವಾಸಿಯಾಗಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಬಳಸುವ ಪೇಟ್ಲಕ್ಕೆ ಭಾರೀ ಬೇಡಿಕೆಯಿದ್ದು ಜನ್ಮಾಷ್ಟಮಿಗೆ ಒಂದು ವಾರವಿರುವಾಗಲೇ  ಪೇಟ್ಲಕ್ಕೆ ಫುಲ್ ಡಿಮ್ಯಾಂಡು  ಇದೆ. ಕಾಪುವಿನ  ಪ್ರಶಾಂತ್ ಪೂಜಾರಿ  ಮತ್ತು ಅವರ ತಂಡ ಆಕರ್ಷಕ ಶೈಲಿಯೊಂದಿಗೆ ಪೇಟ್ಲಗಳನ್ನು     ಬಿದಿರಿನ ಕೋಲಿನ ಮೂಲಕವಾಗಿ ಸಿದ್ಧಪಡಿಸಲಾಗುವ ಪೇಟ್ಲದಲ್ಲಿ ಶಬ್ಬ ಬರಲು ಪೇಟ್ಲ ಕಾಯಿಯನ್ನು ಬಳಸಲಾಗುತ್ತದೆ.

ಕರಾವಳಿ ಪ್ರಚಲಿತ ವಿಡಿಯೋ

ಉಡುಪಿ ಕೃಷ್ಣಮಠದಲ್ಲಿ ಅಷ್ಟಮಿ ಲಡ್ಡು-ಚಕ್ಕುಲಿ ತಯಾರಿ ಪ್ರಾರಂಭ

ಉಡುಪಿ ಕೃಷ್ಣಮಠದಲ್ಲಿ ಅಷ್ಟಮಿ ಲಡ್ಡು-ಚಕ್ಕುಲಿ ತಯಾರಿ ಪ್ರಾರಂಭ  ಉಡುಪಿ : ಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಿದ್ಧತೆ ಭರದಿಂದ ಸಾಗುತ್ತಿದ್ದು, ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡಲಾಗುವ ಲಕ್ಷಾಂತರ ಉಂಡೆ, ಚಕ್ಕುಲಿ ತಯಾರಿ ಸೋಮವಾರದಿಂದ ಪ್ರಾರಂಭವಾಗಿದೆ.  ರಾಜ್ಯದ ವಿವಿಧ ಭಾಗದಿಂದ ಶ್ರೀಕೃಷ್ಣಾಷ್ಟಮಿ ಉತ್ಸವಕ್ಕೆ ಲಕ್ಷಾಂತರ ಜನ ಆಗಮಿಸುತ್ತಾರೆ. ಸೆ. 6ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು 7ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಶ್ರೀ ಕೃಷ್ಣಮಠದಿಂದ ಭಕ್ತರಿಗೆ ಹಾಗೂ ಚಿಣ್ಣರ ಸಂತರ್ಪಣೆಯ ಶಾಲಾ ಮಕ್ಕಳಿಗೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮದಲ್ಲಿ ಉಂಡೆ, ಚಕ್ಕುಲಿ […]

ಅಪರಾಧ

  ಮಲ್ಪೆ ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ

  ಮಲ್ಪೆ ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆತ್ಮಹತ್ಯೆ  ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಶಾಂತಿನಗರದ ನಿವಾಸಿ, ಬಾಕ್ಸಿಂಗ್ ಕ್ಷೇತ್ರದಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಘಟಸಿದೆ.  ಶಾಂತಿನಗರ ನಿವಾಸಿ ವಿರಾಜ್ ಮೆಂಡನ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ. ಇತ್ತೀಚೆಗೆ ವಿರಾಜ್‌ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ. ಮಲ್ಪೆ ಶಾಂತಿನಗರದಲ್ಲಿರುವ ತಮ್ಮ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ವಿರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಅಸಹಜ […]

ಕರಾವಳಿ

ಉದಯಗಿರಿ ಸ್ಚಾಲಿನ್ ಹೇಳಿಕೆಗೆ ಪೇಜಾವರ ಶ್ರೀ ಖಂಡನೆ

ಮೈಸೂರು : ಸನಾತಮ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ. ಅದನ್ನು ಬೇರು ಸಮೇತ ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡಿದ ಮುಖ್ಯಮಂತ್ರಿ ಸ್ಟಾಲಿನ್ ಅವರ ಮಗ ಮತ್ತು ಸಚಿವರಾಗಿರುವ ಉದಯಗಿರಿ ಸ್ಟಾಲಿನ್ ಅವರ ಹೇಳಿಕೆಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಬಲವಾಗಿ ಖಂಡಿಸಿದ್ದಾರೆ.  ಮೈಸೂರಿನಲ್ಲಿ ಚಾತುರ್ಮಾಸ ವೃತದಲ್ಲಿರುವ ಶ್ರೀಗಳು ವಿಡಿಯೋ ಹೇಳಿಕೆಯನ್ನು ನೀಡಿದ್ದು, ರಾಜ್ಯದ ಮಂತ್ರಿಯಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉದಯಗಿರಿ ಸ್ಟಾಲಿನ್ ಅವರು ಸಮಾಜದಲ್ಲಿ ಇಂತಹ ವಿಷ ಬೀಜವನ್ನು ಬಿಚ್ಚುವುದು ಸರಿಯಲ್ಲ. ಅವರನ್ನು ಏನಂತ ಕರೆಯಬೇಕು […]

ಅಪರಾಧ ವಿಡಿಯೋ

ಸೌಜನ್ಯ ಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ

ಸೌಜನ್ಯ ಳಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ  ಉಡುಪಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾ ಸೌಜನ್ಯ ಹೋರಾಟ ಸಮಿತಿಯ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡು ಹುತಾತ್ಮ ಸ್ಮಾರಕದ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಸಭೆಗೂ ಮುನ್ನ ಪ್ರತಿಭಟನಾಕಾರರು ಉಡುಪಿಯ ಅನಂತೇಶ್ವರ ಮತ್ತು ಕೃಷ್ಣ ಮಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಕೃಷ್ಣಮಠದಿಂದ ಅಜ್ಜರಕಾಡುವಿನ ತನಕ ಪಾದಾಯಾತ್ರೆ ನಡೆಸಿದರು. ಪ್ರತಿಭಟನಾ ಸಭೆಯನ್ನು […]

ತಂತ್ರಜ್ಞಾನ

  ಕೊಪ್ಪಲಂಗಡಿಯಲ್ಲಿ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಹೆಚ್ಚಿದ ಒತ್ತಡ:  ಸಾರ್ವಜನಿಕರಲ್ಲಿ ಆತಂಕ

ಕೊಪ್ಪಲಂಗಡಿಯಲ್ಲಿ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಹೆಚ್ಚಿದ ಒತ್ತಡ:  ಸಾರ್ವಜನಿಕರಲ್ಲಿ ಆತಂಕ ಉಡುಪಿ:  ಕಾಪುವಿನ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬಳ್ಳಾರಿಯ ಹೊಸಪೇಟೆಯಿಂದ ಮಂಗಳೂರಿನ ಎಂಆರ್‌ಪಿಎಲ್ ಸಂಸ್ಥೆಗೆ ಸಾಗಿಸುತ್ತಿದ್ದ ನೈಟ್ರೋಜನ್ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ನಲ್ಲಿ ಒತ್ತಡ ಹೆಚ್ಚಾದ ಪರಿಣಾಮ ಅದರ ಚಾಲಕರು ನೈಟ್ರೋಜನ್ ಬಿಡುಗಡೆಗೊಳಿಸಿದ ಘಟನೆ ಶನಿವಾರ ಬೆಳಗ್ಗೆ ಘಟಿಸಿದೆ.  ಈ ಸಂದರ್ಭ ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನ ಸವಾರರು ಹಾಗೂ ಸ್ಥಳೀಯರು ಆತಂಕಿತರಾಗಿದ್ದು ಕಂಡು ಬಂದಿದೆ.   ಪತ್ರಕರ್ತರು ಟ್ಯಾಂಕರ್ ಚಾಲಕರಲ್ಲಿ ಈ ಬಗ್ಗೆ ವಿಚಾರಿಸಿದಾಗ […]

ಕರಾವಳಿ ವಿಡಿಯೋ

ಉಡುಪಿಯಲ್ಲಿ ಮಹಿಳಾ ದೌರ್ಜನ್ಯ ವಿರೋಧಿಸಿ ‘ಕಪ್ಪು ಉಡುಪಿನಲ್ಲಿ ಮಹಿಳೆಯರು’ ವಿಶಿಷ್ಟ ಪ್ರತಿಭಟನೆ

ಉಡುಪಿಯಲ್ಲಿ ಮಹಿಳಾ ದೌರ್ಜನ್ಯ ವಿರೋಧಿಸಿ ‘ಕಪ್ಪು ಉಡುಪಿನಲ್ಲಿ ಮಹಿಳೆಯರು’ವಿಶಿಷ್ಟ ಪ್ರತಿಭಟನೆ ಉಡುಪಿ, ಆ.20: ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ವತಿಯಿಂದ ಕಪ್ಪು ಉಡುಪಿನಲ್ಲಿ ಮಹಿಳೆಯರು ಎಂಬ ವಿಶಿಷ್ಟವಾದ ಮೌನ ಪ್ರತಿಭಟನೆಯನ್ನು ಇಂದು ಉಡುಪಿ ಮದರ್ ಆಫ್ ಸಾರೋಸ್ ಚರ್ಚ್‌ ಎದುರು ಇರುವ ಕೆಎಂ ಮಾರ್ಗದಲ್ಲಿ ಹಮ್ಮಿಕೊಳ್ಳಲಾಗಿತ್ತು.  ಒಕ್ಕೂಟದ ಸದಸ್ಯರು ಹಾಗು ಸಮಾನ ಮನಸ್ಕ ಬೆಂಬಲಿಗರು ಕಪ್ಪುವಸ್ತ್ರ ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ಕೈಯಲ್ಲಿ ಪೋಸ್ಟರ್‌ಗಳನ್ನು ಹಿಡಿದು, ಸಾಲಾಗಿ ನಿಂತು ಮಹಿಳೆಯರ ಮೇಲೆ ನಡೆಯುತ್ತಿರುವ […]

ರಾಜಕೀಯ ವಿಡಿಯೋ

ಇನ್ನು 2- 3 ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಅಯ್ಕೆ- ಕೋಟ ಶ್ರೀನಿವಾಸ ಪೂಜಾರಿ

ಇನ್ನು 2- 3 ದಿನಗಳಲ್ಲಿ ವಿರೋಧ ಪಕ್ಷದ ನಾಯಕನ ಅಯ್ಕೆ- ಕೋಟ ಶ್ರೀನಿವಾಸ ಪೂಜಾರಿ  ಉಡುಪಿ: ಸ್ವಲ್ಪ ವಿಳಂಬ ಆಗಿರಬಹುದು. ಆದರೆ ಯಾರೂ ಕೂಡ ಇದಕ್ಕೆ ಖುಷಿ ಪಡಬೇಕಾದ ಅಗತ್ಯವಿಲ್ಲ. ಇನ್ನು ಎರಡು ಮೂರು ದಿನಗಳ ಒಳಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಿಜ, ಸ್ವಲ್ಪ ವಿಳಂಬ ಆಗಿದೆ. ಆದರೆ ಭ್ರಷ್ಟಾಚಾರ ಮತ್ತು ಇತರ […]

eMedia Kannada  @2025. All Rights Reserved.