Tag: umesh marpalli

ನಿಧನ

ಮಾರ್ಪಳ್ಳಿ ಎಂ.ಲಕ್ಷ್ಮೀನಾರಾಯಣ ರಾವ್ ನಿಧನ (Marpalli M. Lakshminarayana Rao passes away)

ಮಾರ್ಪಳ್ಳಿ ಎಂ.ಲಕ್ಷ್ಮೀನಾರಾಯಣ ರಾವ್ ನಿಧನ ಪೂಣೆಯಲ್ಲಿ ಹೃದಯಾಘಾತದಿಂದ ನಿಧನ  (Udupi) ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಎಂ.ಲಕ್ಷ್ಮೀನಾರಾಯಣ ರಾವ್ (58) ಶನಿವಾರ ಮೃತಪಟ್ಟಿದ್ದಾರೆ. ಅವರು ಪೂಣೆಯಲ್ಲಿರುವ ತನ್ನ ಮಗಳ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.  ಮೃತರು ತಂದೆ, ತಾಯಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಸಹೋದರನನ್ನು ಅಗಲಿದ್ದಾರೆ.

ನಿಧನ

ಪರ್ಕಳ ದೇವಿನಗರ ನಿವಾಸಿ ದಯಾನಂದ ಶೆಟ್ಟಿಗಾರ್ ನಿಧನ (Dayanand Shettigar, a resident of Parkala Devinagar, passes away)

ಪರ್ಕಳ ದೇವಿನಗರ ನಿವಾಸಿ ದಯಾನಂದ ಶೆಟ್ಟಿಗಾರ್ ನಿಧನ ಸಿಕ್ಕಿಂ ಯುನಿವರ್ಸಿಟಿ ಮಣಿಪಾಲ ಮತ್ತು ಐಸಿಡಿಎಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದ್ದರು (Udupi) ಉಡುಪಿ: ಪರ್ಕಳ ದೇವಿನಗರ ನಿವಾಸಿ ದಯಾನಂದ ಶೆಟ್ಟಿಗಾರ್(65) ಹೃದಯಾಘಾತದಿಂದ ಡಿ.9 ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.     ಸಿಕ್ಕಿಂ ಯುನಿವರ್ಸಿಟಿ ಮಣಿಪಾಲ ಮತ್ತು ಐಸಿಡಿಎಸ್ ಸಂಸ್ಥೆಯಲ್ಲಿ‌ ಸುಮಾರು ಮೂವತ್ತು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡಿದ್ದರು.  ಮೃತರು ಪತ್ನಿ ಮತ್ತು ಅಪಾರ ಬಂಧು, ಬಳಗವನ್ನು ದಯಾನಂದ ಶೆಟ್ಟಿಗಾರ್ ಅಗಲಿದ್ದಾರೆ.

ಧಾರ್ಮಿಕ

ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿ ಸಭೆ (Preliminary meeting for the renovation of Marpalli Sri Mahalingeshwar Mahaganapati Temple)

ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವಭಾವಿ ಸಭೆ   ಮುಜರಾಯಿ ಇಲಾಖೆಯಿಂದ 25 ಲಕ್ಷ ರೂ. ಅನುದಾನಕ್ಕೆ ಪ್ರಯತ್ನ– ಸೊರಕೆ (Udupi) ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪೂರ್ವಭಾವಿ ಗ್ರಾಮಸ್ಥರ ಸಭೆಯು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಧ ದಿನೇಶ್ ಶೆಟ್ಟಿ ಕಂಬಳಮನೆ ಅವರ ಅಧ್ಯಕ್ಷತೆಯಲ್ಲಿ ದೇವಸ್ಥಾನದ ಉಮಾಮಹೇಶ್ವರ ಸಭಾಭವನದಲ್ಲಿ  ನಡೆಯಿತು.   ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮುಜರಾಯಿ ಇಲಾಖೆಯಿಂದ 25 […]

ನಿಧನ

ಮಾರ್ಪಳ್ಳಿ : ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಪಾದೂರು ವೇದವ್ಯಾಸ ತಂತ್ರಿ ನಿಧನ (Marpalli: Retired Syndicate Bank employee Padur Vedavyasa Tantri passes away)

ಮಾರ್ಪಳ್ಳಿ : ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಪಾದೂರು ವೇದವ್ಯಾಸ ತಂತ್ರಿ ನಿಧನ  (Udupi) ಉಡುಪಿ: ಮಾರ್ಪಳ್ಳಿ ನಿವಾಸಿ, ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಪಾದೂರು ವೇದವ್ಯಾಸ ತಂತ್ರಿ(80) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.  ಇವರು ಮಾರ್ಪಳ್ಳಿ ಚೆಂಡೆ ಬಳಗದ ಅಧ್ಯಕ್ಷರಾಗಿ, ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಅಭಿವೃದ್ಧಿಯಲ್ಲಿ, ನಾಗರೀಕ ಸಮಿತಿಯ ಸದಸ್ಯರಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.  ಮೃತರು ಪತ್ನಿ, ಒಂದು ಗಂಡು, ಎರಡು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

PROBLEMS

ಉಡುಪಿ: ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ (Udupi: Dicussion on the pros and cons of the new criminal laws)

ಉಡುಪಿ: ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ (Udupi) ಉಡುಪಿ: ಭಾರತೀಯ ದಂಡ ಕ್ರಿಯಾ ಸಂಹಿತೆ ಬದಲಾಗಿ ಜಾರಿಗೊಳ್ಳುತ್ತಿರುವ ಹೊಸ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಿಂದ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಇದರಿಂದ ಸಂತ್ರಸ್ತರು ನ್ಯಾಯ ವಂಚಿತರಾಗಲಿದ್ದಾರೆ. ಇದು ಸಂವಿಧಾನ ನಮಗೆ ನೀಡಿರುವ ನ್ಯಾಯ ಪಡೆಯುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಉಡುಪಿಯ ಹಿರಿಯ ನ್ಯಾಯವಾದಿ ಎಂ. ಶಾಂತಾರಾಮ್ ಶೆಟ್ಟಿ ಆತಂಕ ವ್ಯಕ್ತಪಡಿಸಿದ್ದಾರೆ.   ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ವಕೀಲರ […]

social service ಪ್ರಚಲಿತ

ಉಡುಪಿ ಪತ್ರಕರ್ತರಿಗೆ “ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ” ಕಾರ್ಯಾಗಾರ(“POCSO Act and Media” Workshop for Udupi Journalists)

ಉಡುಪಿ ಪತ್ರಕರ್ತರಿಗೆ “ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ” ಕಾರ್ಯಾಗಾರ (Udupi) ಉಡುಪಿ, ಮೇ 21: ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ.  ಉಡುಪಿ ಜಿಲ್ಲಾ ಕಾರ್ಯನಿರತ […]

ಅಪರಾಧ

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ (Udupi journalists appeal to SP over polling booth inconveniences)

ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಬಗ್ಗೆ ಎಸ್ಪಿಗೆ ಮನವಿ (Udupi) ಉಡುಪಿ: ಈ ಬಾರಿಯ ಲೋಕಸಭಾ ಚುನಾವಣೆಯ ಮತದಾನ ಸಂದರ್ಭ ಮತಗಟ್ಟೆಗಳಲ್ಲಿ ಮಾಧ್ಯಮದವರಿಗೆ ಆಗಿರುವ ತೊಂದರೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ.(Dr Arun K, the superintendent of police) ಅವರಿಗೆ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮೇ 14ರಂದು ಮನವಿ ಸಲ್ಲಿಸಲಾಯಿತು. ಎ.26 ರಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಮತ್ತು ಮೇ 7ರಂದು ಶಿವಮೊಗ್ಗ ಲೋಕಸಭಾ […]

Uncategorised

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ (AGM of Udupi district Workin gournalists Association)

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ  ಉಡುಪಿ, ಮೇ 9: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು (Alevooru Rajesh Shetty) ಅವರ ಅಧ್ಯಕ್ಷತೆಯಲ್ಲಿ ಬುಧವಾರ ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಜರಗಿತು.  ಸಂಘದ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ (Nazeer Polya) ವಾಚಿಸಿದರು. ಲೆಕ್ಕಪತ್ರವನ್ನು ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ (Umesh Marpalli) ಮಂಡಿಸಿದರು. ಈ ಸಂದರ್ಭದಲ್ಲಿ ಸಂಘದ 2024-25ನೇ ಸಾಲಿನ ಗುರುತಿನ […]

eMedia Kannada  @2025. All Rights Reserved.