Tag: vijayapura

ರಾಜಕೀಯ

ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ (Women Culture Brand Ambassador : Minister Laxmi Hebbalkar)

ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌  ವಿಜಯಪುರ : ಮಹಿಳೆ ಹೊರತಾಗಿ ಸಂಸ್ಕೃತಿ ಇಲ್ಲ. ಸಂಸ್ಕೃತಿ ಹೊರತಾಗಿ ಮಹಿಳೆ ಇಲ್ಲ. ಸಂಸ್ಕೃತಿ ಉಳಿದಿದ್ದು ಮಹಿಳೆಯಿಂದ. ಮಹಿಳೆ ಸಂಸ್ಕೃತಿಯ ಬ್ರಾಂಡ್ ಅಂಬಾಸಿಡರ್ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.   ವಿಜಯಪುರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಸ್ವಾಮೀಜಿ ಗುರುನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಹಿಳೆ ಮತ್ತು ಸಂಸ್ಕೃತಿ ಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತ ದೇಶಕ್ಕೆ 5 ಸಾವಿರ ವರ್ಷಗಳ ಇತಿಹಾಸವಿದೆ. ಭಾರತ […]

ಅಪರಾಧ

ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು

ಬ್ಯಾಡ್ಮಿಂಟನ್ ಆಡುವಾಗ ಅಸ್ವಸ್ಥಗೊಂಡಿದ್ದ ಲೋಕಾಯುಕ್ತ ಡಿವೈಎಸ್ಪಿ ಸಾವು  ವಿಜಯಪುರ;ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿ ಲೋಕಾಯುಕ್ತ ಡಿವೈಎಸ್​ಪಿಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಪ್ರಕರಣ ವರದಿಯಾಗಿದೆ. ವಿಜಯಪುರ ಜಿಲ್ಲಾ ಲೋಕಾಯುಕ್ತದಲ್ಲಿ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ್ ನಾಯಕ್ ಮೃತರು. ಇವರು ಇಂದು ವಿಜಯಪುರ ಜಿಲ್ಲಾ‌ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವ ವೇಳೆ ಅಸ್ವಸ್ಥರಾಗಿದ್ದರು. ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅರುಣ್ ನಾಯಕ್ ಪುತ್ರ ಬೆಂಗಳೂರಿನಲ್ಲಿ ವೈದ್ಯರಾಗಿದ್ದು, ಘಟನೆ ಕುರಿತು ಮಾಹಿತಿ ತಿಳಿದು ಆಸ್ಪತ್ರೆಗೆ ತೆರಳಿದ್ದಾರೆ.

ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡದೆ ಹೋದರೆ ಮುಂದಿನ ತೀರ್ಮಾನ ಕೈಗೊಳ್ಳುವೆ-ಮಾಜಿ ಸಚಿವ ಸೋಮಣ್ಣ

ಬೆಂಗಳೂರು: ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಮಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುವೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ. ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಕೇಳಿದ್ದೇನೆ ಎಂದು ಹೇಳಿದ್ದಾರೆ. ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ […]

ಅಪರಾಧ

ಆ್ಯಂಬುಲೆನ್ಸ್ ಅಪಘಾತ : ಒಬ್ಬರು ಸ್ಥಳದಲ್ಲೇ ಸಾವು : ಮೂವರು ಗಂಭೀರ.

ವಿಜಯಪುರ: ಸಿಂದಗಿ‌ ಸಮೀಪ ಲಾರಿ ಹಾಗೂ ಆ್ಯಂಬುಲೆನ್ಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆ್ಯಂಬುಲೆನ್ಸ್‌ನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಜ್ಯ ಹೆದ್ದಾರಿಯಲ್ಲಿನ ಯರಗಲ್ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಅಂತರಗಂಗಿ ಗ್ರಾಮದ ಚನ್ನು ಗಾಣಿಗೇರ (27) ಸಾವೀಡಾದ ವ್ಯಕ್ತಿ ಎಂದು ತಿಳಿಯಲಾಗಿದೆ. ಆ್ಯಂಬುಲೆನ್ಸ್‌ನಲ್ಲಿದ್ದು ಗಂಭೀರವಾಗಿ ಗಾಯಗೊಂಡ ಮೂವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ್ಯಂಬುಲೆನ್ಸ್ ಸಿಂದಗಿಯಿಂದ ಹಂಚಿನಾಳ ಗ್ರಾಮಕ್ಕೆ ರೋಗಿಯನ್ನು ತರಲು […]

ಅಪರಾಧ ದೇಶ-ವಿದೇಶ

ಕಣ್ಣು ಕಾಣದ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿದ ದುಷ್ಕರ್ಮಿ, ಮನನೊಂದು ವೃದ್ಧೆ ಆತ್ಮಹತ್ಯೆ; ಅಮಾನವೀಯ ಘಟನೆ ವರದಿ

  ವಿಜಯನಗರ; ಕಣ್ಣು ಕಾಣದ 58 ವರ್ಷದ ವೃದ್ಧೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ವೆಸಗಿದ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ವ್ಯಾಸಪುರ ತಾಂಡದಲ್ಲಿ ನಡೆದಿದೆ.  ಲೋಕೇಶ ನಾಯ್ಕ್ ಎಂಬಾತನೇ ವೃದ್ಧೆಯ ಮೇಲೆ ಅತ್ಯಾಚಾರ ನಡೆಸಿದ ದುಷ್ಕರ್ಮಿ.   ಕಣ್ಣು ಕಾಣ ವೃದ್ಧೆ ಮೇಲೆ ಅತ್ಯಾಚಾರವೆಸಗಿ ಆರೋಪಿ ಲೋಕೇಶ ನಾಯ್ಕ್ ಪರಾರಿಯಾಗಿದ್ದ. ಕಾಮುಕನ ಕೃತ್ಯಕ್ಕೆ ಮನನೊಂದು ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಲೋಕೇಶ್ ಗೆ ಮದುವೆಯಾಗಿ ಮಕ್ಕಳಿದ್ದಾರೆ‌‌. ಹಗರಿ ಬೊಮ್ಮನಹಳ್ಳಿ ತಾಲೂಕಿನ ವ್ಯಾಸಾಪುರ ತಾಂಡದ ಲೋಕೇಶ ನಾಯ್ಕ್‌ನನ್ನು ಪೊಲೀಸರು ಬಂಧಿಸಿದ್ದಾರೆ. […]

ರಾಜಕೀಯ

ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ – ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ

ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ – ಸಚಿವ ಎಂ.ಬಿ ಪಾಟೀಲ್ ಎಚ್ಚರಿಕೆ ವಿಜಯಪುರ: ‘ಚಕ್ರವರ್ತಿ ಸೂಲಿಬೆಲೆ ಮತ್ತು ಸಂಘ ಪರಿವಾರದವರು ಕಳೆದ ನಾಲ್ಕು ವರ್ಷ ಹಿಜಾಬ್, ಹಲಾಲ್, ಆಜಾನ್ ಸೇರಿದಂತೆ ಪಠ್ಯಪುಸ್ತಕದಲ್ಲಿ ಮಾಡಿರುವ ಅನಾಹುತವನ್ನು ಸರಿಪಡಿಸುವ ಕೆಲಸ ಕಾಂಗ್ರೆಸ್ ಮಾಡಲಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಕೆಲಸ ಮುಂದುವರಿಸಿದರೆ ಸೂಲಿಬೆಲೆಗೆ ಜೈಲು ಕಂಬಿ ಎಣಿಸುವಂತೆ ಮಾಡುತ್ತೇವೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಎಚ್ಚರಿಕೆ ನೀಡಿದರು. ವಿಜಯಪುರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, […]

eMedia Kannada  @2025. All Rights Reserved.