ಉಚ್ಚಿಲ ದಸರಾ ೨೦೨೩ ಪ್ರಯುಕ್ತ ಸಹಸ್ರ ಸುಮಂಗಲಿಯರಿಂದ ಸಹಸ್ರ ಕುಂಕುಮಾರ್ಚನೆ ಸೇವೆ ಸಂಪನ್ನ
ಉಡುಪಿ\ ಉಚ್ಚಿಲ: ಉಚ್ಚಿಲ ದಸರಾ ೨೦೨೩ ಪ್ರಯುಕ್ತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದ (uchila Shri mahalaxmi temple) ಶಾಲಿನಿ ಜಿ ಶಂಕರ್ ತೆರೆದ ಸಭಾ ಭವನದಲ್ಲಿ ಶುಕ್ರವಾರ ಸಂಜೆ ಸಹಸ್ರ ಸುಮಂಗಲೀಯರಿಂದ ಕುಂಕುಮಾರ್ಚನೆ ಸೇವೆ ಸಂಪನ್ನಗೊಂಡಿತು.
ದೇವಳದ ಪ್ರಧಾನ ಅರ್ಚಕ ಶ್ರೀ ಕೆವಿ ರಾಘವೇಂದ್ರ ಉಪಾಧ್ಯಾಯರವರು ಪೂಜಾ ವಿಧಿ ವಿಧಾನ ನೆರವೇರಿಸಿದರು.
ಈ ಸಂದರ್ಭ ಕ್ಷೇತ್ರದ ಗೌರವ ಸಲಹೆಗಾರ ಜಿ ಶಂಕರ್, (dr̤̤ g shankar) ದ.ಕ.ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ದೇವಳದ ಅರ್ಚಕ ರಾಘವೇಂದ್ರ ಉಪಾಧ್ಯಾಯ, ಮ್ಯಾನೇಜರ್ ಸತೀಶ್ ಅಮೀನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.
