• Home  
  •  (Uchila Dasara -2023) ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದಲ್ಲಿ ಮಹಾ ಚಂಡಿಕಾಯಾಗ, ಅನ್ನ ಸಂತರ್ಪಣೆ ಸಂಪನ್ನ
- ಕರಾವಳಿ - ಜೀವನಶೈಲಿ

 (Uchila Dasara -2023) ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದಲ್ಲಿ ಮಹಾ ಚಂಡಿಕಾಯಾಗ, ಅನ್ನ ಸಂತರ್ಪಣೆ ಸಂಪನ್ನ

Share:    ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದಲ್ಲಿ ಮಹಾ ಚಂಡಿಕಾಯಾಗ, ಅನ್ನ ಸಂತರ್ಪಣೆ ಸಂಪನ್ನ (Udupi- Uchila) ಉಡುಪಿ\ ಉಚ್ಚಿಲ; ಇತ್ತೀಚಿಗೆ ನವೀಕೃತಗೊಂಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಮಹಾ ಚಂಡಿಕಾಯಾಗದ ಪೂರ್ಣಾಹುತಿ ಮಂಗಳವಾರ ಮಧ್ಯಾಹ್ನ 12:30ಕ್ಕೆ ಸಂಪನ್ನಗೊಂಡಿತು.   ದೇವಳದ ತಂತ್ರಿವರ್ಯರಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಇವರ ನೇತೃತ್ವದಲ್ಲಿ ದೇಗುಲದ ಪ್ರಧಾನ ಅರ್ಚಕ ವೇದ ಮೂರ್ತಿ ರಾಘವೇಂದ್ರ ಉಪಾಧ್ಯಾಯ ಹಾಗೂ ಋತ್ವಿಜರು ಪೂಜಾ ವಿಧಿ ವಿಧಾನ ಪೂರೈಸಿದರು.  ಮಧ್ಯಾಹ್ನ […]

   ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದಲ್ಲಿ ಮಹಾ ಚಂಡಿಕಾಯಾಗ, ಅನ್ನ ಸಂತರ್ಪಣೆ ಸಂಪನ್ನ

(Udupi- Uchila) ಉಡುಪಿ\ ಉಚ್ಚಿಲ; ಇತ್ತೀಚಿಗೆ ನವೀಕೃತಗೊಂಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಮಹಾ ಚಂಡಿಕಾಯಾಗದ ಪೂರ್ಣಾಹುತಿ ಮಂಗಳವಾರ ಮಧ್ಯಾಹ್ನ 12:30ಕ್ಕೆ ಸಂಪನ್ನಗೊಂಡಿತು.

  ದೇವಳದ ತಂತ್ರಿವರ್ಯರಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಇವರ ನೇತೃತ್ವದಲ್ಲಿ ದೇಗುಲದ ಪ್ರಧಾನ ಅರ್ಚಕ ವೇದ ಮೂರ್ತಿ ರಾಘವೇಂದ್ರ ಉಪಾಧ್ಯಾಯ ಹಾಗೂ ಋತ್ವಿಜರು ಪೂಜಾ ವಿಧಿ ವಿಧಾನ ಪೂರೈಸಿದರು.

 ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ತಾಯಿಯ ಮಹಾ ಪ್ರಸಾದ ಸ್ವೀಕರಿಸಿದರು.

 ಈ ಸಂದರ್ಭ ದೇವಳದ ಗೌರವ ಸಲಹೆಗಾರ ನಾಡೋಜ ಡಾ.ಜಿ. ಶಂಕರ್ (Nadoja Dr G. Shankar), ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್, ಗುಂಡು ಬಿ ಅಮೀನ್, ಶಾಸಕ ಯಶ್ಪಾಲ್ ಸುವರ್ಣ, ದೇವಳದ ಕ್ಷೇತ್ರಾಡಳಿತ  ಮಂಡಳಿಯ ಅಧ್ಯಕ್ಷ ವಾಸುದೇವ ಸಾಲ್ಯಾನ್, ಉದ್ಯಮಿ ಭುವನೇಂದ್ರ ಕಿದಿಯೂರು, ಮಾಜಿ ಜಿಲ್ಲಾ ಪಂಚಾಯತ್‌ ಸದಸ್ಯೆ ಶಿಲ್ಪಾ ಗಂಗಾಧರ ಸುವರ್ಣ ಸಹಿತ ನೂರಾರು ಜನರು ಉಪಸ್ಥಿತರಿದ್ದರು.

Leave a comment

Your email address will not be published. Required fields are marked *

eMedia Kannada  @2025. All Rights Reserved.