• Home  
  • (Udupi crime) ಐದು ವರ್ಷದಿಂದ ತಲೆಮರೆಸಿದ್ದ 6 ಮಂದಿ‌ ಆರೋಪಿಗಳು ಉಡುಪಿಯಲ್ಲಿ ಬಂಧನ
- ಅಪರಾಧ

(Udupi crime) ಐದು ವರ್ಷದಿಂದ ತಲೆಮರೆಸಿದ್ದ 6 ಮಂದಿ‌ ಆರೋಪಿಗಳು ಉಡುಪಿಯಲ್ಲಿ ಬಂಧನ

Share: ಐದು ವರ್ಷದಿಂದ ತಲೆಮರೆಸಿದ್ದ 6 ಮಂದಿ‌ ಆರೋಪಿಗಳು ಉಡುಪಿಯಲ್ಲಿ ಬಂಧನ (Bantwala) ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು.2017ರಲ್ಲಿ ಪರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ನಡೆದ ಅಕ್ರಮ ಮರಳು […]

ಐದು ವರ್ಷದಿಂದ ತಲೆಮರೆಸಿದ್ದ 6 ಮಂದಿ ಆರೋಪಿಗಳು ಉಡುಪಿಯಲ್ಲಿ ಬಂಧನ

(Bantwala) ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.
ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು.
2017ರಲ್ಲಿ ಪರಂಗಿಪೇಟೆಯ ನೇತ್ರಾವತಿ ನದಿ ತೀರದಲ್ಲಿ ನಡೆದ ಅಕ್ರಮ ಮರಳು ದಂಧೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ವಿರುದ್ದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು.
ಆರೋಪಿಗಳು ಉಡುಪಿ ಪರಿಸರದಲ್ಲಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಶಿವಕುಮಾರ್ ಬಿ. ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್ ಪೆಕ್ಟರ್ ಗಳಾದ ಹರೀಶ್ ಎಂ.ಆರ್ ಮತ್ತು ಮೂರ್ತಿ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ. ಎಲ್, ವಿಜಯಕುಮಾರ್ ಅವರ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.